ಪಂಚ ಗ್ಯಾರಂಟಿ ಘೋಷಣೆ ಮಾಡಿದ ಸಿದ್ದರಾಮಯ್ಯ

Spread the love

ಪಂಚ ಗ್ಯಾರಂಟಿ ಘೋಷಣೆ ಮಾಡಿದ ಸಿದ್ದರಾಮಯ್ಯ

ಬೆಂಗಳೂರು: ಮುಂದಿನ ಸಚಿವ ಸಂಪುಟ ಸಭೆ ನಂತರ ಪಂಚ ಯೋಜನೆಗಳ ಜಾರಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸೋಮವಾರ, ಮಂಗಳವಾರ, ಬುಧವಾರ ವಿಧಾನಸಭೆ ಅಧಿವೇಶನ ಕರೆಯುತ್ತಿದ್ದೇವೆ, ಹೊಸ ಸಭಾಪತಿಯನ್ನು ಆಯ್ಕೆ ಮಾಡಲಾಗುವುದು ಎಂದರು.

ಕಟ್ಟು ನಿಟ್ಟಾಗಿ ತೆರಿಗೆಯನ್ನು ವಸೂಲಿ ಮಾಡಿ ಗ್ಯಾರಂಟಿ ಜಾರಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಗೃಹ ಜ್ಯೋತಿ ಯೋಜನೆಯಡಿ ತಿಂಗಳಿಗೆ 200 ಯೂನಿಟ್ ಉಚಿತ​​ ವಿದ್ಯುತ್​ ನೀಡುತ್ತೇವೆ. ಇದಕ್ಕೆ ಸುಮಾರು ತಿಂಗಳಿಗೆ 1200 ಕೋಟಿ ರೂ. ಆಗಬಹುದು. ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಮನೆ ಯಜಮಾನಿಗೆ ಪ್ರತಿ ತಿಂಗಳು 200 ರೂ. ಹಾಕಲಾಗುವುದು. ಅನ್ನ ಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ, ಈ ವರ್ಷದ ಪದವೀದರ, ಪಿಎಚ್​ಡಿ, ಎಂಬಿಬಿಎಸ್ ಪದವೀದರ ನಿರುದ್ಯೋಗಿಗಳಿಗೆ ಎರಡೂವರೆ ವರ್ಷಗಳ ವರೆಗೆ ತಿಂಗಳಿಗೆ ಮೂರು ಸಾವಿರ ರೂ. ನೀಡಲಾಗುವುದು. ಈ ನಡುವೆ ಉದ್ಯೋಗ ಸಿಕ್ಕರೆ ಯುವ ನಿಧಿ ನೀಡಲಾಗುವುದಿಲ್ಲ. ಡಿಪ್ಲಮಾ ಪಾಸ್ ಮಾಡಿದ ನಿರುದ್ಯೋಗಿಗಳಿ ಒಂದೂವರೆ ಸಾವಿರ ರೂ., ಎಲ್ಲಾ ಸರ್ಕಾರಿ ಬಸ್​ನಲ್ಲಿ ಪ್ರಯಾಣಿಸುವ ಕರ್ನಾಟಕದ ಮಹಿಳೆಯರಿಗೆ ಫ್ರೀ ಪಾಸ್ ನೀಡಲಾಗುವುದು, ಬೇರೆ ರಾಜ್ಯಗಳ ಮಹಿಳೆಯರಿಗೆ ಈ ಭಾಗ್ಯ ಇರುವುದಿಲ್ಲ ಎಂದರು. 5 ಗ್ಯಾರಂಟಿಗಳಿಗೆ ತಾತ್ವಿಕವಾಗಿ ಸಂಪುಟದಲ್ಲಿ ಒಪ್ಪಿಗೆ ನೀಡಿದ್ದೇವೆ ಎಂದರು.

ನ್ಯಾಯಯುತವಾಗಿ ಕರ್ನಾಟಕಕ್ಕೆ ಸಿಗಬೇಕಿದ್ದ 5495 ಕೋಟಿ ರೂ.ವನ್ನು ಬಿಜೆಪಿ ರಾಜ್ಯ ಸರ್ಕಾರ ಕೇಳಿಲ್ಲ. ರಾಜ್ಯದ ಸಂಸದರು ಕೇಳಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು. ಕೇಂದ್ರ ಸರ್ಕಾರದಿಂದ ನಮ್ಮ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ. ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಈ ದೇಶದ ಸಾಲ 53 ಲಕ್ಷದ 11 ಸಾವಿರ ಕೋಟಿ ಇತ್ತು. ಮೋದಿ ಅಧಿಕಾರಕ್ಕೆ ಬಂದ ನಂತರ 9 ವರ್ಷಗಳಲ್ಲಿ ದೇಶದ ಮೇಲೆ 155 ಲಕ್ಷ ಕೋಟಿ ಆಗಿದೆ. ಬೊಮ್ಮಾಯಿ ಯಡಿಯೂರಪ್ಪ ಸರ್ಕಾರದಲ್ಲಿ 4 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ನಾನು ಐದು ವರ್ಷಗಳ ಕಾಲ ಸರ್ಕಾರ ನಡೆಸಿದಾಗಲೂ ಇಷ್ಟೊಂದು ಸಾಲ ಮಾಡಿರಲಿಲ್ಲ. ಹೀಗಾಗಿ ನಾವು ಕರ್ನಾಟಕವನ್ನು ಆರ್ಥಿಕ ದಿವಾಳಿಗೆ ಸಿಲುಕಿಸದೆ ನಾವು ಗ್ಯಾರಂಟಿಗಳನ್ನು ಈಡೇರಿಸುತ್ತೇವೆ ಎಂದರು.

ನಮ್ಮ ಯೋಜನೆಗಳಿಗೆ ಸುಮಾರು 50 ಸಾವಿರ ಕೋಟಿ ಆಗಬಹುದು ಕೇಂದ್ರದಿಂದ ಈ ವರ್ಷ 50 ಸಾವಿರ ಕೋಟಿ ರೂ. ಬರುತ್ತದೆ. ಕರ್ನಾಟಕದಿಂದ 4 ಲಕ್ಷ ಕೋಟಿ ರೂ. ತೆರಿಗೆ ಕಟ್ಟುತ್ತೇವೆ. ಆದರೆ ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ನಮಗೆ ಅನ್ಯಾಯವಾಗಿದೆ ಎಂದರು.

ಣಾಳಿಕೆಯಲ್ಲಿ ಜನರಿಗೆ ಅನೇಕ ಭರವಸೆಗಳನ್ನು ಕೊಟ್ಟಿದ್ದೆವು. ಇದು ಕೇವಲ ಒಂದು ವರ್ಷದಲ್ಲಿ ಈಡೇರಿಸುವ ಭರವಸೆ ಅಲ್ಲ. ಅಲ್ಲದೇ ರಾಜ್ಯದ ಜನರಿಗೆ ಐದು ಗ್ಯಾರಂಟಿಗಳನ್ನು ನೀಡಿದ್ದೆವು. ಮೊದಲ ಸಂಪುಟದಲ್ಲಿ 5 ಗ್ಯಾರಂಟಿ ಜಾರಿ ಬಗ್ಗೆ ಹೇಳಿದ್ದೆವು ಎಂದು ಸಿದ್ದರಾಮಯ್ಯ ಹೇಳಿದರು. ನಮ್ಮ ಸರ್ಕಾರ ನುಡಿದಂತೆ ನಡೆಯುತ್ತದೆ. ಕಳೆದ ಬಾರಿ ನಾವು 158 ಭರವಸೆಗಳನ್ನು ಈಡೇರಿಸಿದ್ದೆವು. ಹೆಚ್ಚುವರಿಯಾಗಿ 30 ಕಾರ್ಯಕ್ರಮಗಳನ್ನು ಜಾರಿ ಮಾಡಿದ್ದೆವು ಎಂದರು.


Spread the love

Leave a Reply

Please enter your comment!
Please enter your name here