ಪಂಚ ರಾಜ್ಯಗಳ ಚುನಾವಣೆ: 3 ರಾಜ್ಯಗಳಲ್ಲಿ ಬಿಜೆಪಿ, ಪಂಜಾಬ್, ಮಣಿಪುರದಲ್ಲಿ ಕಾಂಗ್ರೆಸ್ ಮುನ್ನಡೆ! – Live

Spread the love

ಪಂಚ ರಾಜ್ಯಗಳ ಚುನಾವಣೆ: 3 ರಾಜ್ಯಗಳಲ್ಲಿ ಬಿಜೆಪಿ, ಪಂಜಾಬ್, ಮಣಿಪುರದಲ್ಲಿ ಕಾಂಗ್ರೆಸ್ ಮುನ್ನಡೆ!

ಪಂಚರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ನೇರ ಪ್ರಸಾರ

ನವದೆಹಲಿ: ಪಂಚರಾಜ್ಯ ವಿಧಾನಸಭಾ ಚುನಾವಣೆಯ ಮತಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಉತ್ತರ ಪ್ರದೇಶದಲ್ಲಿ ಬಿಜೆಪಿ ಆರಂಭಿಕ ಭಾರಿ ಮುನ್ನಡೆ ಸಾಧಿಸಿದೆ.
ಉತ್ತರ ಪ್ರದೇಶದಲ್ಲಿ ಬಿಜೆಪಿ ಭಾರಿ ಮುನ್ನಡೆ ಪಡೆದಿದ್ದು, ಮಹಾ ಮೈತ್ರಿ ಹೊರತಾಗಿಯೂ ಸಮಾಜವಾದಿ ಪಕ್ಷ, ಕಾಂಗ್ರೆಸ್ ಪಕ್ಷಗಳು ಹಿನ್ನಡೆ ಸಾಧಿಸಿವೆ. ಇನ್ನು ಉತ್ತರಾಂಖಂಡದಲ್ಲೂ ಅಢಳಿತಾರೂಢ ಬಿಜೆಪಿ ಮುನ್ನಡೆಯಲ್ಲಿದ್ದು, ಸಿಎಂ ಹರೀಶ್ ರಾವತ್ ನೇತೃತ್ವದ ಬಿಜೆಪಿ ಮತ್ತೆ ಅಧಿಕಾರದತ್ತ ದಾಪುಗಾಲಿರಿಸಿದೆ. ಇನ್ನು ಮಣಿಪುರದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು, ಬಿಜೆಪಿ 1 ರಲ್ಲಿ ಮುನ್ನಡೆ ಸಾಧಿಸಿದೆ.
ಗೋವಾ ಚುನಾವಣಾ ಫಲಿತಾಂಶ ತೀವ್ರ ಕುತೂಹಲ ಕೆರಳಿಸಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ಕಂಡುಬರುತ್ತಿದೆ, ಒಟ್ಟು 40 ಸ್ಥಾನಗಳ ಪೈಕಿ ಕಾಂಗ್ರೆಸ್ ಮತ್ತು ಬಿಜೆಪಿ ತಲಾ 2 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ.

ಉತ್ತರ ಪ್ರದೇಶದಲ್ಲಿ ಬಿಜೆಪಿ, ಪಂಜಾಬ್ ನಲ್ಲಿ ಕಾಂಗ್ರೆಸ್ ಮುನ್ನಡೆ!

ನವದೆಹಲಿ: ಪಂಚರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟಗೊಳ್ಳುತ್ತಿದ್ದು, ಉತ್ತರಾಖಂಡ, ಉತ್ತರ ಪ್ರದೇಶ, ಗೋವಾ, ಮಣಿಪುರ ಮತ್ತು ಪಂಜಾಬ್ ರಾಜ್ಯ ವಿಧಾನಸಭೆ ಚುನವಾಣ ಫಲಿತಾಂಶ ಶನಿವಾರ ಪ್ರಕಟವಾಗಲಿದೆ.
ಐದೂ ರಾಜ್ಯಗಳಲ್ಲೂ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದ್ದು, ಬೆಳಗ್ಗೆ 8 ಗಂಟೆಯಿಂದಲೇ ಮತ ಎಣಿಕೆ ಕಾರ್ಯ ಆರಂಭವಾಗಿದೆ. ಮತ ಎಣಿಕೆ ಕೇಂದ್ರಗಳ ಸುತ್ತ ಭಾರಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ಪೊಲೀಸರ ಸರ್ಪಗಾವಲಿನಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಇನ್ನು ಇಡೀ ಚುನಾವಣೆಯಲ್ಲಿ ಕೇಂದ್ರ ಉತ್ತರ ಪ್ರದೇಶ ವಿಧಾನಸಭಾ ಚುನವಾಣಾ ಫಲಿತಾಂಶ ಕೇಂದ್ರಬಿಂದುವಾಗಿದ್ದು, ಚುನಾವಣಾ ಫಲಿತಾಂಶವನ್ನು ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ, ಸುಧಾರಣಾ ಅಜೆಂಡಾ ಹಾಗೂ ನೋಟು ನಿಷೇಧ ಘೋಷಣೆ ನಿರ್ಧಾರಗಳಿಗೆ ಸಂಬಂಧಿಸಿದಂತೆ ಜನಾಭಿಪ್ರಾಯ ಎಂದೇ ಪರಿಗಣಿಸಲಾಗಿದೆ.
ಉತ್ತರಾಖಂಡದಲ್ಲಿ ಸಿಎಂ ಹರೀಶ್ ರಾವತ್ ರಾಜಕೀಯ ಭವಿಷ್ಯದ ಪ್ರಶ್ನೆಯಾಗಿದ್ದು, ಗೋವಾದಲ್ಲಿ ಸಿಎಂ ಲಕ್ಷ್ಮೀಕಾಂತ್ ಪರ್ಸೇಕರ್ ಮತ್ತು ಕೇಂದ್ರ ಸಚಿವ ಮನೋಹರ್ ಪರಿಕ್ಕರ್ ಅವರು ತಮ್ಮ ಪ್ರತಿಷ್ಟೆಯನ್ನು ಪಣಕ್ಕಿಟ್ಟಿದ್ದಾರೆ. ಇನ್ನು ಮಣಿಪುರದಲ್ಲಿ ಐರೋಮ್ ಶರ್ಮಿಳಾ ಚುನಾವಣಾ ಕಣಕ್ಕೆ ಧುಮುಕಿದ್ದು, ತಮ್ಮ ಮೇಲೆ ಜನ ಎಷ್ಟರ ಮಟ್ಟಿಗೆ ಭರವಸೆ ಇಟ್ಟಿದ್ದಾರೆ ಎಂಬುದು ಈ ಚುನಾವಣೆ ಮೂಲಕ ನಿರ್ಧಾರವಾಗುತ್ತದೆ.
ಎಲ್ಲರ ಚಿತ್ತ ಉತ್ತರ ಪ್ರದೇಶದತ್ತ
ಇನ್ನು ಇಡೀ ದೇಶದ ಕಣ್ಣು ಇದೀಗ ಉತ್ತರ ಪ್ರದೇಶ ಚುನಾವಣಾ ಫಲಿತಾಂಶದತ್ತ ನೆಟ್ಟಿದ್ದು, ಸಮೀಕ್ಷೆಗಳು ಬಿಜೆಪಿ ಪರವಾಗಿದ್ದರೂ, ಅಚ್ಚರಿ ಫಲಿತಾಂಶ ನೀಡಲು ಎಸ್ ಪಿ, ಕಾಂಗ್ರೆಸ್ ಮತ್ತು ಬಿಜೆಪಿ ಹವಣಿಸುತ್ತಿವೆ. ಪ್ರಮುಖವಾಗಿ ಸಮಾಜವಾದಿ ಪಕ್ಷ ಈ ಚುನಾವಣೆಯನ್ನು ಪ್ರತಿಷ್ಟೆಯ ಪ್ರಶ್ನೆಯಾಗಿ ಸ್ವೀಕರಿಸಿದ್ದು, ಹೇಗಾದರೂ ಸರಿ ಈ ಭಾರಿ ಅಧಿಕಾರದ ಗದ್ದುಗೆ ಏರಲೇಬೇಕು ಎಂದು ನಿರ್ಧರಿಸಿದೆ. ಇದೇ ಕಾರಣಕ್ಕೆ ಸಮಾಜವಾದಿ ಪಕ್ಷ ಕಾಂಗ್ರೆಸ್ ಪಕ್ಷದ ಕೈ ಹಿಡಿದಿದ್ದು, ಅನಿವಾರ್ಯವಾದರೆ ಮಾಯಾವತಿ ಅವರ ಬಿಎಸ್ ಪಿಯೊಂದಿಗೂ ಕೈ ಜೋಡಿ ಅಧಿಕಾರ ರಚಿಸುವುದಾಗಿ ಅಖಿಲೇಶ್ ಯಾದವ್ ಈಗಾಗಲೇ ಘೋಷಣೆ ಮಾಡಿದ್ದಾರೆ. ಇನ್ನು ಎಸ್ಪಿ ಜತೆ ಕೈಜೋಡಿಸಿ, ಮಹಾ ಮೈತ್ರಿಕೂಟ ರಚಿಸುವ ಬಗ್ಗೆ ಬಿಎಸ್​ಪಿ ಮುಖ್ಯಸ್ಥೆ ಮಾಯಾವತಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಫಲಿತಾಂಶ ಬಳಿಕ ಪರಿಸ್ಥಿತಿ ಆಧರಿಸಿ ಮುಂದಿನ ನಿರ್ಧಾರ ಕೈಗೊಳ್ಳಲು ಮಾಯಾವತಿ ನಿರ್ಧರಿಸಿದ್ದಾರೆ

ಕೃಪೆ: ಕನ್ನಡಪ್ರಭ


Spread the love