ಪಂಪ್ವೆಲ್ ಇಂಡಿಯಾನ ಆಸ್ಪತ್ರೆಗೆ ಕೆಲಸಕ್ಕೆಂದು ಹೋದ ಯುವತಿ ನಾಪತ್ತೆ

Spread the love

ಪಂಪ್ವೆಲ್ ಇಂಡಿಯಾನ ಆಸ್ಪತ್ರೆಗೆ ಕೆಲಸಕ್ಕೆಂದು ಹೋದ ಯುವತಿ ನಾಪತ್ತೆ

ಮಂಗಳೂರು : ಯುವತಿ ನಾಪತ್ತೆಯಾಗಿರುವ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೂರ್ಣಿಮಾ (35) ಎಂಬ ಯುವತಿ ಆಗಸ್ಟ್ 13ರಂದು ಪಂಪ್ವೆಲ್ ಇಂಡಿಯಾನ ಆಸ್ಪತ್ರೆಗೆ ಕೆಲಸಕ್ಕೆಂದು ಹೋದವರು ವಾಪಸ್ಸು ಮನೆಗೆ ಬಾರದೆ ಕಾಣೆಯಾಗಿದ್ದಾರೆ. ಕಾಣೆಯಾದ ಯುವತಿಯ ಚಹರೆ ಇಂತಿವೆ:- ಹೆಸರು- ಪೂರ್ಣಿಮಾ, ಪ್ರಾಯ – 35 ವರ್ಷ, ಎತ್ತರ-5 ಅಡಿ, ಎಣ್ಣೆ ಕಪ್ಪು ಮೈ ಬಣ್ಣ, ಸಾಧಾರಣ ಶರೀರ, ಎದುರಿನ ಹಲ್ಲು ಹೊರಬಂದಂತೆ ಕಾಣುತ್ತದೆ. ಧರಸಿದ ಬಟ್ಟೆ-ನೀಲಿ ಬಣ್ಣದ ಟಾಪ್ ಹಾಗೂ ಜೀನ್ಸ್ ಪ್ಯಾಂಟ್ ಶರ್ಟ್, ಮಾತನಾಡುವ ಭಾಷೆ- ಕನ್ನಡ, ತುಳು.

ಕಾಣೆಯಾದ ಯುವತಿ ಬಗ್ಗೆ ಮಾಹಿತಿ ದೊರಕಿದ್ದಲ್ಲಿ ಪೊಲೀಸ್ ಉಪನಿರೀಕ್ಷಕರು, ಕಂಕನಾಡಿ ನಗರ ಠಾಣೆ, ಮಂಗಳೂರು ದೂರವಾಣಿ ಸಂಖ್ಯೆ 0824 2220529, 9480805354, 0824 2220800 ನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.


Spread the love