ಪಕ್ಷ ವಿರೋಧಿ ಚಟುವಟಿಕೆ: ಬಿಜೆಪಿಯಿಂದ ತೆಂಕನಿಡಿಯೂರು ಗ್ರಾಪಂ ಅಧ್ಯಕ್ಷೆ ಉಚ್ಛಾಟನೆ

Spread the love

ಪಕ್ಷ ವಿರೋಧಿ ಚಟುವಟಿಕೆ: ಬಿಜೆಪಿಯಿಂದ ತೆಂಕನಿಡಿಯೂರು ಗ್ರಾಪಂ ಅಧ್ಯಕ್ಷೆ ಉಚ್ಛಾಟನೆ

ಉಡುಪಿ: ಪಕ್ಷ ವಿರೋಧಿ ಚಟುವಟಿಕೆ ಹಾಗೂ ಅಶಿಸ್ತಿನ ವರ್ತನೆಗಾಗಿ ತೆಂಕನಿಡಿಯೂರು ಗ್ರಾಮ ಪಂಚಾಯತ್ನ ಅಧ್ಯಕ್ಷೆ ಶೋಭಾ ಡಿ. ನಾಯ್ಕ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಭಾರತೀಯ ಜನತಾ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಿ ಬಿಜೆಪಿ ಉಡುಪಿ ನಗರ ಅಧ್ಯಕ್ಷ ದಿನೇಶ್ ಅಮೀನ್ ಆದೇಶ ಹೊರಡಿಸಿದ್ದಾರೆ.

ಉಡುಪಿ ವಿಧಾನಸಭಾ ಕ್ಷೇತ್ರದ ತೆಂಕನಿಡಿಯೂರು ಗ್ರಾಪಂ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತಿದ್ದ ನೀವು, ಪಕ್ಷದ ಚೌಕಟ್ಟನ್ನು ಮೀರಿ ಗ್ರಾಪಂನ ಸದಸ್ಯರು ಹಾಗೂ ನಾಯಕರ ಮೇಲೆ ಸುಳ್ಳು ಕೇಸು ದಾಖಲಿಸಿದ್ದು, ಪಕ್ಷಕ್ಕೆ ಮುಜುಗರ ಮಾಡುವಂತ ಸನ್ನಿವೇಶ ನಿರ್ಮಾಣ ಮಾಡಿದ್ದೀರಿ. ಅಲ್ಲದೇ ಪಂಚಾಯತ್ಗೆ ಸಂಬಂಧಪಟ್ಟ ಕೆಲವೊಂದು ನಿರ್ಧಾರಗಳನ್ನು ಪಕ್ಷದ ಗ್ರಾಪಂ ಸದಸ್ಯರ ಗಮನಕ್ಕೆ ತಾರದೇ ಭ್ರಷ್ಟಾಚಾರ ಮಾಡಿದ್ದು, ಮೇಲ್ನೋಟಕ್ಕೆ ಸಾಬೀತಾಗಿದೆ. ಹೀಗಾಗಿ ತಮ್ಮ ಅಶಿಸ್ತಿನ ವರ್ತನೆಗಾಗಿ ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಚಿಸಲಾಗಿದೆ ಎಂದು ದಿನೇಶ್ ಅಮೀನ್ ಆದೇಶದಲ್ಲಿ ತಿಳಿಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments