ಪಕ್ಷ ವಿರೋಧಿ ಚುಟುವಟಿಕೆ; ಅಮೃತ್ ಶೆಣೈ ಕಾಂಗ್ರೆಸ್ ಪಕ್ಷದಿಂದ ಅಮಾನತು

Spread the love

ಪಕ್ಷ ವಿರೋಧಿ ಚುಟುವಟಿಕೆ; ಅಮೃತ್ ಶೆಣೈ ಕಾಂಗ್ರೆಸ್ ಪಕ್ಷದಿಂದ ಅಮಾನತು

ಉಡುಪಿ: ಉಡುಪಿಯಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಅಭ್ಯರ್ಥಿಯ ವಿರುದ್ದವಾಗಿ ಸ್ಪರ್ಧಿಸಿದ ಪಕ್ಷೇತರ ಅಭ್ಯರ್ಥಿ, ಎಐಸಿಸಿ ಸದಸ್ಯ ಅಮೃತ್ ಶೆಣೈ ಅವರನ್ನು ಪಕ್ಷವಿರೋಧಿ ಚುಟುವಟಿಕೆಯ ಆಧಾರದ ಮೇರೆಗೆ ಅಮಾನತು ಮಾಡಲಾಗಿದೆ.

ಈ ಕುರಿತು ಪಕ್ಷದ ಪ್ರಧಾನ ಕಾರ್ಯದರ್ಶಿ ಹಾಜಿ ಷಫೀವುಲ್ಲ ಅವರು ಪ್ರಕಟಣೆ ನೀಡಿದ್ದು, ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆಯ ಮೈತ್ರಿ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಸಹಸದಸ್ಯರಾದ ಅಮೃತ್ ಶೆಣೈ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ಆಧಾರ ಮೇರೆಗೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರುಷಗಳ ಕಾಲ ಕೆಪಿಸಿಸಿ ಅಧ್ಯಕ್ಷರ ನಿರ್ದೇಶನದ ಮೇರೆಗೆ ಅಮಾನತು ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

1 Comment

Comments are closed.