ಪಚ್ಚನಾಡಿ ಬೆಂಕಿ ದುರಂತಕ್ಕೆ ಜಿಲ್ಲಾಡಳಿತದ ನಿರ್ಲಕ್ಷ್ಯ ಕಾರಣ – ನವೀನ್ ಆರ್ ಡಿಸೋಜ

Spread the love

ಪಚ್ಚನಾಡಿ ಬೆಂಕಿ ದುರಂತಕ್ಕೆ ಜಿಲ್ಲಾಡಳಿತದ ನಿರ್ಲಕ್ಷ್ಯ ಕಾರಣ – ನವೀನ್ ಆರ್ ಡಿಸೋಜ

ಮಂಗಳೂರು: ಪಚ್ಚನಾಡಿ ಡಂಪಿಂಗ್ ಯಾರ್ಡ್ ನಲ್ಲಿ ಸತತವಾಗಿ ಬೆಂಕಿ ಅನಾಹುತವಾಗುತ್ತಿದ್ದು ಇದಕ್ಕೆ ಜಿಲ್ಲಾಡಳಿತ, ಶಾಸಕ, ಸಂಸದರು ಹಾಗೂ ಮಹಾನಗರಪಾಲಿಕೆಯ ಬೇಜವಾಬ್ದಾರಿತನ ಕಾರಣ ಎಂದು ಪಾಲಿಕೆಯ ಪ್ರತಿಪಕ್ಷ ನಾಯಕರಾದ ನವೀನ್ ಆರ್ ಡಿ’ಸೋಜಾ ಆರೋಪಿಸಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಟ್ಟ ಪಚ್ಚನಾಡಿ ಡಂಪಿಂಗ್ ಯಾರ್ಡ್ ನಲ್ಲಿ ಸತತವಾಗಿ ಬೆಂಕಿ ಅನಾಹುತವಾಗುತ್ತಿದ್ದು, ಇದರಿಂದಾಗಿ ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ (ಅಂಗವಿಕಲ ಶಾಲೆ, ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜ್, ಕರಾವಳಿ ಕಾಲೇಜ್ ಹಾಗೂ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ) ತೊಂದರೆಯಾಗುತ್ತಿದೆ. ಪಚ್ಚನಾಡಿ ಸುತ್ತಮುತ್ತಲಿನ ಪ್ರದೇಶಗಳಾದ ತಿರುವೈಲು, ವಾಮಂಜೂರು, ಕುಡುಪು, ಬೋಂದೇಲ್, ಪದವಿನಂಗಡಿ, ಕಾವೂರು ಮತ್ತು ಯೆಯ್ಯಾಡಿ ಪ್ರದೇಶಗಳಿಗೆ ತುಂಬಾ ತೊಂದರೆಯಾಗಿದೆ. ಸಣ್ಣ ಮಕ್ಕಳು, ಹಿರಿಯರು, ಗರ್ಭಿಣಿ ಮಹಿಳೆಯರು ಹಾಗೂ ಅನಾರೋಗ್ಯ ಪೀಡಿತರಿಗೆ, ಅಸ್ತಮಾ ರೋಗಿಗಳಿಗೆ ತುಂಬಾ ತೊಂದರೆಯಾಗುತ್ತಿದೆ.

ಈ ದುರಂತವು ಮಹಾನಗರ ಪಾಲಿಕೆಯ ಆಡಳಿತ ವೈಫಲ್ಯ, ಜಿಲ್ಲಾಡಳಿತದ ವೈಫಲ್ಯ, ಶಾಸಕರ (ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ) ನಳಿನ್ ಕುಮಾರ್ ಕಟೀಲ್ ರವರ ಬೇಜವಾಬ್ದಾರಿ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಸಾರ್ವಜನಿಕರ ಆರೋಗ್ಯದ ಬಗ್ಗೆ ಗಮನಹರಿಸದೆ ಇರುವುದು ನಿಮ್ಮ ಬೇಜವಾಬ್ದಾರಿತನ ತೋರುತ್ತಿದೆ. ಈ ಕೂಡಲೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕಾಗಿ ಆಗ್ರಹಿಸಿದ್ದಾರೆ.


Spread the love

Leave a Reply

Please enter your comment!
Please enter your name here