ಪಡುಬಿದ್ರೆ: ಬೈಕ್ ಗೆ ಟ್ಯಾಂಕರ್ ಢಿಕ್ಕಿ: ಇಬ್ಬರು ಬೈಕ್ ಸವಾರರು ಮೃತ್ಯು

Spread the love

ಪಡುಬಿದ್ರೆ: ಬೈಕ್ ಗೆ ಟ್ಯಾಂಕರ್ ಢಿಕ್ಕಿ: ಇಬ್ಬರು ಬೈಕ್ ಸವಾರರು ಮೃತ್ಯು

ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಮೂಳೂರು ವೆಸ್ಟ್ ಕೋಸ್ಟ್ ನರ್ಸರಿ ಮುಂಭಾಗ ಬೈಕ್ ಗೆ ಟ್ಯಾಂಕರ್ ಢಿಕ್ಕಿ ಹೊಡೆದು ಬೈಕ್ ಸವಾರ ಮತ್ತು ಸಹ ಸವಾರ ಮೃತಪಟ್ಟ ಘಟನೆ ಶನಿವಾರ ಸಂಜೆ ಸಂಭವಿಸಿದೆ.

ಮೃತರನ್ನು ಪಲಿಮಾರು ಅವರಾಲು ಮಟ್ಟು ನಿವಾಸಿಗಳಾದ ಸುಬ್ರಹ್ಮಣ್ಯ (30) ಮತ್ತು ಗಿರೀಶ್ (26) ಎಂದು ಗುರುತಿಸಲಾಗಿದೆ

ಪಲ್ಸರ್ ಬೈಕ್ ಮತ್ತು ಟ್ಯಾಂಕರ್ ಉಡುಪಿ ಕಡೆಯಿಂದ ಪಡುಬಿದ್ರಿ ಕಡೆ ಸಾಗುತ್ತಿದ್ದು ಹಿಂಬದಿಯಿಂದ ಬಂದ ಟ್ಯಾಂಕರ್ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಓರ್ವ ಸ್ಥಳದಲ್ಲಿಯೇ ದಾರುಣವಾಗಿ ಮೃತಪಟ್ಟಿದ್ದರೆ, ಮತ್ತೋರ್ವ ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಕಾಪು ಪೊಲೀಸ್ ವೃತ್ತ ನಿರೀಕ್ಷಕ ಕೆ. ಸಿ ಪೂವಯ್ಯ, ಪಡುಬಿದ್ರಿ ಪೊಲೀಸ್ ಠಾಣಾಧಿಕಾರಿ ಪುರುಷೋತ್ತಮ್ ಭೇಟಿ ನೀಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


Spread the love