ಪಣಂಬೂರಿನಲ್ಲಿ ಸಿಐಎಸ್ ಎಫ್ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಆತ್ಮಹತ್ಯೆಗೆ ಯತ್ನ

Spread the love

ಪಣಂಬೂರಿನಲ್ಲಿ ಸಿಐಎಸ್ ಎಫ್ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಆತ್ಮಹತ್ಯೆಗೆ ಯತ್ನ

ಮಂಗಳೂರು: ನವ ಮಂಗಳೂರು ಬಂದರಿನ ಮುಖ್ಯ ಗೇಟ್ ನಲ್ಲಿ ಕರ್ತವ್ಯದಲ್ಲಿದ್ದ ಸೆಂಟ್ರಲ್ ಇಂಡಸ್ಟ್ರೀಯ ಸೆಕ್ಯೂರಿಟಿ ಫೋರ್ಸ್ ನ ಪಿಎಸ್ ಐ ಒರ್ವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬುಧವಾರ ನಡೆದಿದೆ.

ಆತ್ಮಹತ್ಯೆಗೆ ಯತ್ನಿಸಿದ ಸಿಐಎಸ್ ಎಫ್ ಪಿಎಸ್ ಐ ರಾಜಸ್ಥಾನದ ಭರತ್ ಪುರ ಜಿಲ್ಲೆಯ ಜ್ಯೋತಿ ಬಾಯಿ (33) ಎಂದು ಗುರುತಿಸಲಾಗಿದೆ.

ಬುಧವಾರ ಬೆಳಿಗ್ಗೆ ಘಟನೆ ನಡೆದಿದ್ದು, ಗಂಭೀರ ಗಾಯಗೊಂಡಿರುವ ಜ್ಯೋತಿ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೌಟಂಬಿಕ ಕಾರಣಗಳಿಂದಾಗಿ ಜ್ಯೋತಿ ಅವರು ಆತ್ಮಹತ್ಯೆಗೆ ಯತ್ನಿಸಿರುವುದಾಗಿ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.


Spread the love