ಪಣಂಬೂರು: ಮೀನು ಹಿಡಿಯಲು ಹೋದ ವ್ಯಕ್ತಿ ನೀರು ಪಾಲು

Spread the love

ಪಣಂಬೂರು: ಮೀನು ಹಿಡಿಯಲು ಹೋದ ವ್ಯಕ್ತಿ ನೀರು ಪಾಲು

ಮಂಗಳೂರು: ತೋಟ ಬೆಂಗ್ರೆ ಅಳಿವೆ ಬಾಗಿಲು ಬಳಿ ನದಿಯಲ್ಲಿ ಬಲೆ ಹಾಕಿ ಮೀನು ಹಿಡಿಯಲು, ಮೀನುಗಾರಿಕೆಗೆ ಹೋದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ‌ ಘಟನೆ ನಡೆದಿದೆ.

. ಮನೋಹರ್ ಪುತ್ರನ್ (53) ಮೃತ ವ್ಯಕ್ತಿ.ಬುಧವಾರ ಸಂಜೆ 6:30ಕ್ಕೆ‌ ಈ ಘಟನೆ ನಡೆದಿದೆ.

ಇವರು ಬಲೆ ಹಾಕಿ ಮೀನು ಹಿಡಿಯಲು ಹೋದಾಗ ನೀರಿಗೆ ಬಿದ್ದು ಮೃತ ಪಟ್ಟಿರುತ್ತಾರೆ. ಬಳಿಕ ಸ್ಥಳಿಯರು ಹಾಗೂ ಪಣಂಬೂರು ಠಾಣಾ ಪೋಲಿಸ್ ಅಧಿಕಾರಿಗಳ ಸಹಾಯದಿಂದ ಹುಡುಕಾಟ ನಡೆಸಲಾಯಿತು. ಸುಮಾರು ರಾತ್ರಿ 9:30 ಸಮಯ ಮೃತದೇಹ ಪತ್ತೆಯಾಗಿದೆ.

ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love
Subscribe
Notify of

0 Comments
Inline Feedbacks
View all comments