ಪಣಂಬೂರು: ರಿಕ್ಷಾ ಚಾಲಕನಿಗೆ ಮಾರಕಾಸ್ತ್ರದಿಂದ ಹಲ್ಲೆ; ಪ್ರಕರಣ ದಾಖಲು

Spread the love

ಪಣಂಬೂರು: ರಿಕ್ಷಾ ಚಾಲಕನಿಗೆ ಮಾರಕಾಸ್ತ್ರದಿಂದ ಹಲ್ಲೆ; ಪ್ರಕರಣ ದಾಖಲು
 
ಮಂಗಳೂರು: ರಿಕ್ಷಾ ಚಾಲಕನಿಗೆ ಮಾರಕಾಸ್ತ್ರದಿಂದ ಇರಿದಿರುವ ಘಟನೆ ಪಣಂಬೂರು ಬೀಚ್‌ ರಸ್ತೆಯಲ್ಲಿ ಗುರುವಾರ ನಡೆದಿದೆ.

ಮಾರಕಾಸ್ತ್ರದಿಂದ ಇರಿತಕ್ಕೆ ಒಳಗಾದವರನ್ನು ಮಂಗಳೂರು ಬಂದರ್ ನಿವಾಸಿ ಅರಾಫತ್ (30) ಎಂದು ಗುರುತಿಸಲಾಗಿದೆ‌.

ಅರಾಫತ್ ಮಂಗಳೂರು ನಗರ ವಲಯದ ರಿಕ್ಷಾ ಚಾಲಕರಾಗಿದ್ದು, ನಗರದಿಂದ ಪಣಂಬೂರಿಗೆ ಬಾಡಿಗೆ ಹೋಗಿ ಪ್ರಯಾಣಿಕರನ್ನು ಬಿಟ್ಟು ಪಣಂಬೂರು ಬೀಚ್ ಬಳಿಯ ಪಾರ್ಕ್ ನಲ್ಲಿ ಬಾಡಿಗೆಗಾಗಿ ಕಾಯುತ್ತಿದ್ದರು ಎನ್ನಲಾಗಿದೆ.

ಈ ವೇಳೆ ಅದೇ ರಿಕ್ಷಾ ಪಾರ್ಕ್‌ನಲ್ಲಿ ಬಾಡಿಗೆ ಮಾಡುತ್ತಿದ್ದ ನಾಲ್ವರು ರಿಕ್ಷಾ ಚಾಲಕರು “ಮ‌ಂಗಳೂರು ನಗರದ ರಿಕ್ಷಾ ಚಾಲಕರು ಇಲ್ಲಿ ಬಾಡಿಗೆ ಮಾಡಬಾರದೆಂದು ಆಕ್ಷೇಪಿಸಿ ಮಾರಕಾಸ್ತ್ರದಿಂದ ಇರಿದಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯಿಂದ ಅರಾಫತ್ ಕೈಗೆ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಘಟನೆಗೆ ಸಂಬಂಧಿಸಿ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ‌.


Spread the love

Leave a Reply