ಪತ್ನಿಯನ್ನು ಕೊಲೆಗೈದು ಪತಿ ನೇಣು ಬಿಗಿದು ಆತ್ಮಹತ್ಯೆ

Spread the love

ಪತ್ನಿಯನ್ನು ಕೊಲೆಗೈದು ಪತಿ ನೇಣು ಬಿಗಿದು ಆತ್ಮಹತ್ಯೆ

ಮಂಗಳೂರು: ನಗರದ ಬಿಜೈ ಸಮೀಪದ ಕಾಪಿಕಾಡ್ ನಾಲ್ಕನೇ ಕ್ರಾಸ್‌ನ ಅಪಾರ್ಟ್‌ಮೆಂಟ್‌ವೊಂದರಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಂದು ಬಳಿಕ ತಾನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು (ಶನಿವಾರ) ವರದಿಯಾಗಿದೆ.

ಶೈಲಜಾ ರಾವ್ (64) ಎಂಬವರನ್ನು ಅವರ ಪತಿ ದಿನೇಶ್‌ ರಾವ್ (65) ಎಂಬವರು ಉಸಿರುಗಟ್ಟಿಸಿ, ಕೊಲೆಗೈದು ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡನೆಂದು ಪೊಲೀಸ್ ಮೂಲಗಳು ತಿಳಿಸಿವೆ.

ದಿನೇಶ್ ರಾವ್ ನಿವೃತ್ತ ಕೆನರಾ ಬ್ಯಾಂಕ್ ಉದ್ಯೋಗಿಯಾಗಿದ್ದರು ಎಂದು ತಿಳಿದು ಬಂದಿದೆ‌. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ಆರಂಭಿಸಿದ್ದಾರೆ.


Spread the love