ಪರಮೇಶ್ವರ್- ಸಿದ್ದರಾಮಯ್ಯಗೆ ಈಶ್ವರಪ್ಪ ಸವಾಲ್!

Spread the love

ಪರಮೇಶ್ವರ್- ಸಿದ್ದರಾಮಯ್ಯಗೆ ಈಶ್ವರಪ್ಪ ಸವಾಲ್!

ಮೈಸೂರು: ಸಿದ್ದರಾಮಯ್ಯ ಸೋಲಿಸಲು ಪರಮೇಶ್ವರ್, ಪರಮೇಶ್ವರ್ ಸೋಲಿಸಲು ಸಿದ್ದರಾಮಯ್ಯ ಮುಂದಾಗಿಲ್ಲ ಎಂಬುದನ್ನು ಇಬ್ಬರು ಪ್ರಮಾಣ ಮಾಡಲಿ ಎಂದು ರಾಜ್ಯ ಕಾಂಗ್ರೆಸ್ ನಾಯಕರಿಗೆ ಗ್ರಾಮೀಣಾಭಿವೃದ್ಧಿ‌ ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್ ಈಶ್ವರಪ್ಪ ಸವಾಲ್ ಹಾಕಿದ್ದಾರೆ.

ಮೈಸೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಚುನಾವಣೆಗೆ ಇನ್ನೂ ಒಂದೂವರೆ ವರ್ಷ ಬಾಕಿಯಿದೆ ಆಗಲೇ ಕಾಂಗ್ರೆಸ್ ನವರು ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡಿಕೊಂಡಿದ್ದು, ಐವರು ಸ್ವಯಂ ಘೋಷಿತ ಮುಖ್ಯಮಂತ್ರಿಗಳಿದ್ದಾರೆ. ಒಂದೊಂದು ಸಮುದಾಯಕ್ಕೆ ಒಬ್ಬೊಬ್ಬ ನಾಯಕ ಸಿಎಂ ಆಗಬೇಕು ಎಂದು ಘೋಷಣೆ ಮಾಡಿಕೊಳ್ಳುತ್ತಿದ್ದಾರೆ ಎಂದು ;ಲೇವಡಿ ಮಾಡಿದರು.

ಸುದ್ದಿಗೋಷ್ಠಿಯುದ್ದಕ್ಕೂ ಕಾಂಗ್ರೆಸ್ ನಾಯಕರ ಮೇಲೆ ವಾಗ್ದಾಳಿ ನಡೆಸಿದ ಅವರು, .ನಿಮ್ಮ ಪಕ್ಷ ನಿಮ್ಮ ಶಾಸಕರನ್ನ ಉಳಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ವಿರೋಧ ಪಕ್ಷಕ್ಕೂ ಕಾಂಗ್ರೆಸ್ ಬರಲ್ಲ. ಎಂದರಲ್ಲದೆ, ಬಿಜೆಪಿಗೆ ಬಂದಿರುವ 17 ಮಂದಿ ಕಾಂಗ್ರೆಸ್ ಗೆ ಮತ್ತೆ ಸೇರಿಸಿಕೊಳ್ಳುವ ವಿಚಾರದಲ್ಲಿ ಡಿಕೆಶಿ, ಸಿದ್ದರಾಮಯ್ಯ ನಡುವೆ ಕಿತ್ತಾಟ ನಡೆಯುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಗೆ ಅಸ್ತಿತ್ವವೇ ಇಲ್ಲ ಹೀಗಿರುವಾಗ 17 ಮಂದಿ ಆ ಕಡೆ ಮೂಸಿಯೂ ನೋಡಲ್ಲ. ಮುಳುಗುತ್ತಿರುವ ಪಕ್ಷಕ್ಕೆ ಯಾರಾದರೂ ಮತ್ತೆ ಹೋಗ್ತಾರ ಎಂದು ಪ್ರಶ್ನಿಸಿದರು.

ಇದೇ ವೇಳೆ ಸಚಿವ ಸಂಪುಟದಲ್ಲಿ ಹಿಂದುಳಿದ, ದಲಿತ ವರ್ಗದವರಿಗೆ ಅವಕಾಶ ನೀಡಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿದರು.


Spread the love