ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ತರಬೇತಿ: ಅರ್ಜಿ ಆಹ್ವಾನ

Spread the love

ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ತರಬೇತಿ: ಅರ್ಜಿ ಆಹ್ವಾನ

ಮಂಗಳೂರು: 2026-27ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿಯನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಶಿಷ್ಯವೇತನ ಮಂಜೂರು ಮಾಡಲು hಣಣಠಿs://ಣತಿಜ.ಞಚಿಡಿಟಿಚಿಣಚಿಞಚಿ.gov.iಟಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಮಾಸಿಕ ಶಿಷ್ಯ ವೇತನಕ್ಕೆ ಅರ್ಜಿ ಸಲ್ಲಿಸಲು ಯಾವುದೇ ಕಾಲಮಿತಿಯು ಇರುವುದಿಲ್ಲ. ವರ್ಷದ ಎಲ್ಲಾ ದಿನಗಳಲ್ಲೂ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಅರ್ಜಿ ಸಲ್ಲಿಸಿದ ನಂತರ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ನಗರದ ಕೊಟ್ಟಾರ ಅಬ್ಬಕ್ಕನಗರದಲ್ಲಿರುವ ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿಯವರ ಕಛೇರಿ (ದೂರವಾಣಿ 0824-2451269) ಸಲ್ಲಿಸಬೇಕು ಎಂದು ಯೋಜನಾ ಸಮನ್ವಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love
Subscribe
Notify of

0 Comments