ಪರಿಷತ್ ಚುನಾವಣೆ: ರಾಜೇಂದ್ರ ಕುಮಾರ್ ಗೆ ಟಿಕೇಟ್ ನೀಡಲು ಡಿಕೆಶಿ ಭೇಟಿಯಾದ ಕೈ ಮುಖಂಡರು

Spread the love

ಪರಿಷತ್ ಚುನಾವಣೆ: ರಾಜೇಂದ್ರ ಕುಮಾರ್ ಗೆ ಟಿಕೇಟ್ ನೀಡಲು ಡಿಕೆಶಿ ಭೇಟಿಯಾದ ಕೈ ಮುಖಂಡರು

ಉಡುಪಿ: ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು ಪಕ್ಷೇತರರಾಗಿ ವಿಧಾನಪರಿಷತ್‌ ಚುನಾವಣೆಯಲ್ಲಿ ಸ್ಪರ್ಧಿಸುವ ಘೋಷಣೆ ಮಾಡಿದ ಬೆನ್ನಲ್ಲೇ ಕಾಂಗ್ರೆಸ್‌ ನಾಯಕರು ಅವರಿಗೆ ಪಕ್ಷದಿಂದ ಟಿಕೇಟ್‌ ನೀಡುವಂತೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಅವರಿಗೆ ಮನವಿ ಮಾಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಅವರನ್ನು ಮಾಜಿ ಸಚಿವ ವಿನಯ್‌ ಕುಮಾರ್‌ ಸೊರಕೆ ನೇತೃತ್ವದ ನಿಯೋಗ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಜೊತೆಯಾಗಿರಿಸಿಕೊಂಡು ಬೆಂಗಳೂರಿನಲ್ಲಿ ಭೇಟಿಯಾಗಿ ವಿಧಾನಪರಿಷತ್‌ ಗೆ ಪಕ್ಷೇತರ ಅಭ್ಯರ್ಥಿಯಾಗುವ ಬದಲು ಪಕ್ಷದಿಂದ ಸ್ಪರ್ಧಿಸಲು ಅವಕಾಶ ನೀಡುವಂತೆ ಮನವಿ ಮಾಡಿದರು.

ಈಗಾಗಲೇ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು ಪಕ್ಷೇತರರಾಗಿ ವಿಧಾನಪರಿಷತ್‌ ಚುನಾವಣೆಯಲ್ಲಿ ಸ್ಪರ್ಧಿಸುವ ಘೋಷಣೆ ಮಾಡಿದ್ದು, ಮಂಗಳೂರಿನಲ್ಲಿ ಕಾರ್ಯಾಲಯವನ್ನು ಕೂಡ ಉದ್ಘಾಟನೆ ಮಾಡಿದ್ದಾರೆ. ಸಹಕಾರಿ ಕ್ಷೇತ್ರಕ್ಕೆ ವಿಧಾನ ಪರಿಷತ್‌ನಲ್ಲಿ ಅವಕಾಶ ಕೊಡಿ ಎಂದು ಸಾಕಷ್ಟು ಬಾರಿ ಮನವಿ ಸಲ್ಲಿಸಿದರೂ ಯಾರೂ ಸ್ಪಂದಿಸಲಿಲ್ಲ. ಹಾಗಾಗಿ ಸಹಕಾರಿಗಳ, ಸರ್ವ ಪಕ್ಷಗಳ, ಸಾಮಾಜಿಕ, ಧಾರ್ಮಿಕ ಮುಖಂಡರ ಒತ್ತಡಕ್ಕೆ ಮಣಿದು ವಿಧಾನ ಪರಿಷತ್ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವುದಾಗಿ ಹೇಳಿಕೊಂಡಿದ್ದರು. ಸದ್ಯ ಕಾಂಗ್ರೆಸ್‌ ಪಕ್ಷ ಯಾರಿಗೆ ಮಣೆ ಹಾಕಲಿದೆ ಎನ್ನುವುದು ಕಾದು ನೋಡಬೇಕಾಗಿದೆ.


Spread the love