ಪರಿಸರ ಸ್ನೇಹಿ ಗಣೇಶ ಮೂರ್ತಿ ಮಾರಾಟಕ್ಕೆ

Spread the love

ಪರಿಸರ ಸ್ನೇಹಿ ಗಣೇಶ ಮೂರ್ತಿ ಮಾರಾಟಕ್ಕೆ
ಮ0ಗಳೂರು: ಜಲಮಾಲಿನ್ಯವನ್ನು ತಡೆಗಟ್ಟುವ ಉದ್ದೇಶದಿಂದ ಪಿಲಿಕುಳದಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನು ತಯಾರಿಸಿ ವಿತರಣೆ ಮಾಡಲು ಕ್ರಮ ಕೈಗೊಂಡಿದೆ. ಈ ಬಾರಿ ಆಚರಿಸಲಾಗುವ ಶ್ರೀ ವಿನಾಯಕ ಚೌತಿಯ ಆಚರಣೆಗೆ ಆವೆ ಮಣ್ಣಿನಿಂದ ವಾಸ್ತುವಿಗೆ ಅನುಗುಣವಾಗಿ, ಹಾನಿಕಾರಕವಲ್ಲದ ರೀತಿಯಲ್ಲಿ ರಾಸಾಯನಿಕ ಬಣ್ಣಗಳನ್ನು ಬಳಸದೆ, ತಯಾರಿಸಿದ ಗಣಪತಿ ಮೂರ್ತಿಗಳನ್ನು ಮಾರಾಟ ಮಾಡಲಾಗುವುದು. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸಹಾಯಧನ, ಸಹಕಾರದೊಂದಿಗೆ ಕಡಿಮೆ ಬೆಲೆಗೆ ಮಾರಾಟ ಮಾಡಲಾಗುವುದು. ಭಕ್ತಾದಿಗಳು ಮಂಗಳೂರಿನ ಕದ್ರಿ ಮಲ್ಲಿಕಟ್ಟೆಯಲ್ಲಿರುವ ಪಿಲಿಕುಳದ “ಪರಂಪರಾ” ದಲ್ಲಿ ಕೂಡಲೇ ಕಾಯ್ದಿರಿಸಿಕೊಂಡು ಖರೀದಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 9480158056 ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.


Spread the love