ಪರೇಶ್ ಮೇಸ್ತಾ ಸಾವಿನ ಸಿಬಿಐ ವರದಿ ರಾಜ್ಯ ಬಿಜೆಪಿಯ ಮುಖಕ್ಕೆ ಬಡಿದ ತಪರಾಕಿ – ಸಿದ್ದರಾಮಯ್ಯ

Spread the love

ಪರೇಶ್ ಮೇಸ್ತಾ ಸಾವಿನ ಸಿಬಿಐ ವರದಿ  ರಾಜ್ಯ ಬಿಜೆಪಿಯ ಮುಖಕ್ಕೆ ಬಡಿದ ತಪರಾಕಿ – ಸಿದ್ದರಾಮಯ್ಯ

ಬೆಂಗಳೂರು: ಹೊನ್ನಾವರದ ಪರೇಶ್ ಮೇಸ್ತನದ್ದು ಹತ್ಯೆ ಅಲ್ಲ, ಆಕಸ್ಮಿಕ‌ ಸಾವು ಎಂಬ ಸಿಬಿಐನ ವಿಚಾರಣಾ ವರದಿ ರಾಜ್ಯ ಬಿಜೆಪಿಯ ಮುಖಕ್ಕೆ ಬಡಿದ ತಪರಾಕಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಬಿಜೆಪಿ ಅವರಿಗೆ ಮಾನ-ಮರ್ಯಾದೆ ಇದ್ದರೆ ನಮ್ಮ ಮೇಲೆ ಮಾಡಿದ್ದ ಸುಳ್ಳು ಆರೋಪಕ್ಕಾಗಿ ಕ್ಷಮೆ ಕೋರಬೇಕು. ಬಿಜೆಪಿ ಗೆದ್ದಿರುವ ಪ್ರತಿಯೊಂದು ಸ್ಥಾನದ ಹಿಂದೆ ಪರೇಶ್ ಮೇಸ್ತನಂತಹ ಅಮಾಯಕ ಯುವಕರ ರಕ್ತ ಇದೆ. ಬಿಜೆಪಿ ನಾಯಕರೇ, ನೀವು ಅನುಭವಿಸುತ್ತಿರುವ ಅಧಿಕಾರದ ಕುರ್ಚಿಗೆ ಮೇಸ್ತಾನಂತಹ ಯುವಕರ ರಕ್ತದ ಕಲೆ ಅಂಟಿಕೊಂಡಿದೆ ಎಂದು ಅವರು ಹೇಳಿದ್ದಾರೆ.


Spread the love