ಪರೇಶ್ ಮೇಸ್ತಾ ಸಾವು ಕೊಲೆಯಲ್ಲ ಆಕಸ್ಮಿಕ ಸಾವು – ನ್ಯಾಯಾಲಯಕ್ಕೆ ಸಿಬಿಐ ವರದಿ ಸಲ್ಲಿಕೆ

Spread the love

ಪರೇಶ್ ಮೇಸ್ತಾ ಸಾವು ಕೊಲೆಯಲ್ಲ ಆಕಸ್ಮಿಕ ಸಾವು – ನ್ಯಾಯಾಲಯಕ್ಕೆ ಸಿಬಿಐ ವರದಿ ಸಲ್ಲಿಕೆ

ಕಾರವಾರ: ಉತ್ತರ ಕನ್ನಡದ ಹೊನ್ನಾವರದಲ್ಲಿ 2017 ರಲ್ಲಿ ನಡೆದ ಪರೇಶ್ ಮೇಸ್ತ ಪ್ರಕರಣದ ಕುರಿತಂತೆ ಸಿಬಿಐ ಅಧಿಕಾರಿಗಳು ತನಿಖೆ ನಡೆಸಿ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಕೆ ಮಾಡಿದ್ದು ಇದು ಕೊಲೆಯಲ್ಲಿ ಆಕಸ್ಮಿಕ ಸಾವು ಎಂದು ವರದಿಯಲ್ಲಿ ಉಲ್ಲೇಖಿಸಿರುವುದಾಗಿ ಮೂಲಗಳು ತಿಳಿಸಿವೆ.

ನಾಲ್ಕು ವರ್ಷಕ್ಕೂ ಅಧಿಕ ಕಾಲ ತನಿಖೆ ನಡೆಸಿದ ಸಿಬಿಐ ಅಧಿಕಾರಿಗಳು ಸುಮಾರು 1500 ಪುಟಗಳ ವರದಿಯನ್ನು ಹೊನ್ನಾವರದ ನ್ಯಾಯಾಲಯಕ್ಕೆ ಭಾನುವಾರ ಸಲ್ಲಿಸಿದ್ದು ಅದನ್ನು ನ್ಯಾಯಾಲಯ ಸೋಮವಾರ ಸ್ವೀಕೃತಗೊಳಿಸಿದೆ. ಮುಂದಿನ ವಿಚಾರಣೆಯನ್ನು ನ್ಯಾಯಾಲಯ ನವೆಂಬರ್ 16ಕ್ಕೆ ಮುಂದೂಡಿದೆ.

2017ರ ಡಿಸೆಂಬರ್ 6ರಂದು ಹೊನ್ನಾವರದಲ್ಲಿ ನಡೆದ ಗಲಭೆಯಲ್ಲಿ ಮೀನುಗಾರ ಯುವಕ ಪರೇಶ್ ಮೇಸ್ತಾ ಕಾಣೆಯಾಗಿದ್ದು, ಬಳಿಕ ಡಿಸೆಂಬರ್ 8ರಂದು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು.

ಚುನಾವಣಾ ಸಮಯದಲ್ಲಿ ಇದನ್ನೆ ಪ್ರಮುಖ ವಿಷಯವನ್ನಾಗಿಸಿಕೊಂಡು ಬಿಜೆಪಿ ಪ್ರಕರಣದ ಕುರಿತು ಭಾರಿ ಪ್ರತಿಭಟನೆಗಳನ್ನು ಮಾಡಿತ್ತು ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿದ್ದರಿಂದ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರಕಾರವು ಪ್ರಕರಣವನ್ನು ಸಿಬಿಐಗೆ ವಹಿಸಿತ್ತು.


Spread the love