ಪರೇಶ್ ಮೇಸ್ತ ಸಾವಿನ ಪ್ರಕರಣ; ಮರು ತನಿಖೆಗೆ ಕ್ರಮ – ಸಚಿವ ಕೋಟ

Spread the love

ಪರೇಶ್ ಮೇಸ್ತ ಸಾವಿನ ಪ್ರಕರಣ; ಮರು ತನಿಖೆಗೆ ಕ್ರಮ – ಸಚಿವ ಕೋಟ

ಹೊನ್ನಾವರ: ಪರೇಶ್ ಮೇಸ್ತ ಸಾವಿನ ಪ್ರಕರಣದ ಮರು ತನಿಖೆ ಮಾಡುವಂತೆ ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸಪೂಜಾರಿ ಹೇಳಿದರು.

ಅವರು ಹೊನ್ನಾವರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಪರೇಶ್ ಮೇಸ್ತ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಬಿ ರಿಪೋರ್ಟ್ ಸಲ್ಲಿಸಿರುವ ಹಿನ್ನಲೆಯಲ್ಲಿ ಗೃಹ ಸಚಿವರೊಂದಿಗೆ ಮಾತನಾಡಿದ್ದು, ಪರೇಶ್ ಮೇಸ್ತ ಅವರ ತಂದೆ ಪ್ರಕರಣದ ಮರು ತನಿಖೆ ಮಾಡುವಂತೆ ಮನವಿ ಮಾಡಿದ್ದು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ. ಸಿಬಿಐ ಹೊರತಾಗಿ ಬೇರೆ ತನಿಖಾ ಸಂಸ್ಥೆಗಳಿಂದ ತನಿಖೆ ಕೈಗೊಳ್ಳಬೇಕೇ ಎನ್ನುವುದನ್ನೂ ಕೂಡ ಪರಿಶೀಲಿಸಲಾಗುವುದು. ಈ ಹಿಂದೆ ಕೂಡ ಕೆಲವು ಪ್ರಕರಣಗಳನ್ನು ಮರು ತನಿಖೆ ಮಾಡಿದ ಉದಾಹರಣೆಗಳಿವೆ ಎಂದರು.

ಕಾಂಗ್ರೆಸ್ ಮುಖಂಡರು ಪರೇಶ್ ಮೇಸ್ತ ಅವರ ತಂದೆಯ ಜಾಗದಲ್ಲಿ ನಿಂತ ಅವರ ನೋವನ್ನು ಅರ್ಥ ಮಾಡಿಕೊಳ್ಳಬೇಕು. ಸಾವಿನಲ್ಲಿ ರಾಜಕೀಯ ಮಾಡಬಾರದು ಎಂದರು.


Spread the love