
ಪಾಂಗಾಳ ಶರತ್ ಶೆಟ್ಟಿ ಕೊಲೆ ಪ್ರಕರಣ – ನಾಲ್ವರು ಆರೋಪಿಗಳ ಬಂಧನ
ಉಡುಪಿ: ಕಳೆದ ರವಿವಾರ ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಪಾಂಗಾಳ ಶರತ್ ಶೆಟ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಸುರತ್ಕಲ್ ಕುಳಾಯಿ ನಿವಾಸಿ ದಿನೇಶ್ ಶೆಟ್ಟಿ (20) ಮತ್ತು ಲಿಖಿತ್ ಕುಲಾಲ್ (21), ಆಕಾಶ್ ಕರ್ಕೆರಾ (24), ಪ್ರಸನ್ನ ಶೆಟ್ಟಿ (40) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಲ್ಲಿ ದಿವೇಶ್ ಮತ್ತು ಲಿಖಿತ್ ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಒಂದು ವಾರದ ಪೊಲೀಸ್ ಕಸ್ಟಡಿಗೆ ವಹಿಸಲಾಗಿದೆ. ಆಕಾಶ್ ಕರ್ಕೇರಾ ಮತ್ತು ಪ್ರಸನ್ನ ಶೆಟ್ಟಿಯನ್ನು ಬುಧವಾರ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುವುದು
ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಉಡುಪಿ ಜಿಲ್ಲಾ ಎಸ್ಪಿ ಅಕ್ಷಯ್ ಹಾಕೆ ಮಚ್ಚೀಂದ್ರ ಪಾಂಗಾಳ ಮಂಡೇಡಿ ನಿವಾಸಿ ದಿ| ವಿಠಲ ಶೆಟ್ಟಿ ಮತ್ತು ಸುಲೋಚನಾ ಶೆಟ್ಟಿ ದಂಪತಿಯ ಪುತ್ರ ಶರತ್ ವಿ. ಶೆಟ್ಟಿ (42) ಪಾಂಗಾಳ ಪರಿಸರದಲ್ಲಿ ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಕ್ರಿಯಾಶೀಲನಾಗಿರುತ್ತಿದ್ದ ಶರತ್ ಶೆಟ್ಟಿ ರವಿವಾರ ಪಾಂಗಾಳ ಪಡು ವಿನ ಬಬ್ಬುಸ್ವಾಮಿ ದೈವಸ್ಥಾನ ದಲ್ಲಿ ನಡೆಯುತ್ತಿದ್ದ ನೇಮದಲ್ಲಿ ಪಾಲ್ಗೊಂಡಿದ್ದು, ಆ ವೇಳೆ ಮಾತುಕತೆ ಗೆಂದು ಕರೆದ ದುಷ್ಕರ್ಮಿಗಳು ಬಳಿಕ ಮಾರಕಾಸ್ತ್ರದಿಂದ ಇರಿದು ಕೊಲೆಗೈದು ಪರಾರಿಯಾಗಿದ್ದರು. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣ ದಾಖಲಾದ ಬಳಿಕ ಕಾರ್ಕಳ ಡಿವೈಎಸ್ಪಿ ಅರವಿಂದ್ ಕಲಗುಜ್ಜಿ ಮಾರ್ಗದರ್ಶನದಲ್ಲಿ ಕಾಪು ವೃತ್ತ ನಿರೀಕ್ಷಕ ಕೆ ಸಿ ಪೂವಯ್ಯ ನೇತೃತ್ವದಲ್ಲಿ ಕಾಪು, ಹೆಬ್ರಿ, ಕಾರ್ಕಳ ಮತ್ತು ಶಿರ್ವದ ಪಿಎಸ್ ಐ ಗಳನ್ನು ಒಳಗೊಂಡ ತಂಡವನ್ನು ರಚಿಸಿ ತನಿಖೆಯನ್ನು ಕೈಗೊಂಡು ಆರೋಪಿಗಳನ್ನುಲಾಗಿದೆ ಎಂದರು. ಪ್ರಕರಣದಲ್ಲಿ ಇನ್ನೂ ಹಲವರು ಸೇರಿದ್ದು ಅದರಲ್ಲಿ ಕಟಪಾಡಿ ಯೋಗಿಶ್ ಆಚಾರ್ಯ, ನಾಗರಾಜ್, ಭೂಗತ ಪಾತಕಿ ಕಲಿ ಯೋಗಿಶ್ ಮತ್ತು ಕೃತ್ಯಕ್ಕೆ ಸಹಕರಿಸಿದ ಮುಕೇಶ್ ಹಾಗೂ ಇತರ ಆರೋಪಿಗಳ ಶೋಧ ಕಾರ್ಯ ಮುಂದುವರೆದಿದೆ.
ಜಾಗದ ತಕರಾರಿಗೆ ಸಂಬಂಧಿಸಿ ಡಿಸೆಂಬರ್ ತಿಂಗಳಲ್ಲಿ ಗಲಾಟೆ ನಡೆದಿದ್ದು ಇದೇ ದ್ವೇಷಕ್ಕೆ ಕಾರಣವಾಗಿತ್ತು ಉದ್ಯಮದಲ್ಲಿನ ವೈಯುಕ್ತಿಕ ದ್ವೇಷವೇ ಕೊಲೆಗೆ ಪ್ರಮುಖ ಕಾರಣವಾಗಿದ್ದು, ಸತತ ಒಂದು ತಿಂಗಳು ಎಲ್ಲಾ ರೀತಿಯ ತಯಾರಿಯನ್ನು ನಡೆಸಿ ಕೊಲೆ ಮಾಡಲಾಗಿದೆ. ಘಟನೆಯಲ್ಲಿ ಮೊಬೈಲ್, ಚಪ್ಪಲಿ, ಸ್ಕೂಟಿ ಹಾಗೂ ಸಿಸಿಟಿವಿ ದ್ರಶ್ಯಾವಳಿಗಳ ಆಧಾರದಲ್ಲಿಟ್ಟುಕೊಂಡು ಕೊಲೆ ಪ್ರಕರಣವನ್ನು ಭೇಧಿಸಲಾಗಿದೆ ಎಂದರು.