‘ಪಾಕಿಸ್ಥಾನ್ ಜಿಂದಾಬಾದ್’ ಘೋಷಣೆ ಕೂಗಿದ ವಿಚಾರ: ಮೂರು ಮಂದಿ ವಶಕ್ಕೆ

Spread the love

‘ಪಾಕಿಸ್ಥಾನ್ ಜಿಂದಾಬಾದ್’ ಘೋಷಣೆ ಕೂಗಿದ ವಿಚಾರ: ಮೂರು ಮಂದಿ ವಶಕ್ಕೆ

ಬೆಳ್ತಂಗಡಿ: ಗ್ರಾ.ಪಂ.ನ ಮತ ಎಣಿಕೆ ಕಾರ್ಯ ನಡೆಯುತ್ತಿದ್ದ ವೇಳೆ ಉಜಿರೆ‌ಯಲ್ಲಿ ಪಾಕಿಸ್ಥಾನ ಪರ ಜಿಂದಾಬಾದ್ ಘೋಷಣೆ ಕೂಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು 6 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ.

ದಿನಾಂಕ 30.12.2020 ರಂದು ಬೆಳ್ತಂಗಡಿ ಉಜಿರೆಯಲ್ಲಿ ದೇಶ ವಿರೋಧಿ ಘೋಷಣೆ ಕೂಗಿರುವ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ 99/20 ರ ತನಿಖೆ ಮುಂದುವರಿದಂತೆ ಸದರಿ ವೀಡಿಯೋವನ್ನು ತಾಂತ್ರಿಕ ವಿಶ್ಲೇಷಣೆಗೆ ಒಳಪಡಿಸಲಾಗಿದೆ. ಸದರಿ ವೀಡಿಯೋವನ್ನು ಹೊರತುಪಡಿಸಿ ಈ ಘಟಣೆಗೆ ಸಂಬಂಧಿಸಿದ ಮೊಬೈಲ್ ಮೂಲಕ ಚಿತ್ರೀಕರಿಸಲಾದ ಇತರ ಎರಡು ವೀಡಿಯೊಗಳು ಲಭ್ಯವಾಗಿದ್ದು ಅವುಗಳನ್ನೂ ತಾಂತ್ರಿಕ ವಿಶ್ಲೇಷಣೆಗೆ ಒಳಪಡಿಸಲಾಗಿದೆ.

ಪ್ರಕರಣದ ತನಿಖೆಯ ಆಧಾರದಲ್ಲಿ ಹಾಗೂ ಸಂಗ್ರಹಿಸಲಾಗಿರುವ ಸಾಕ್ಷ್ಯಗಳ ಅಧಾರದಲ್ಲಿ ಪಿಲಿಚಂಡಿ ಕಲ್ಲು ಕುವೆಟ್ಟು ನಿವಾಸಿಗಳಾದ ಮೊಹಮ್ಮದ್ ಹರ್ಷದ್( 22 ), ದಾವೂದ್ ( 36) ಹಾಗೂ ಇಸಾಕ್ (28) ಎಂಬವರುಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದ್ದು, ತನಿಖೆ ಪ್ರಗತಿಯಲ್ಲಿದೆ.


Spread the love