ಪಾಕ್ ಪರ ಘೋಷಣೆ ವಿಚಾರ:ಬೆಳ್ತಂಗಡಿ ಪೊಲೀಸ್ ಠಾಣೆ ಎದುರು ಎಸ್.ಡಿ.ಪಿ.ಐ ಕಾರ್ಯಕರ್ತರಿಂದ ಪ್ರತಿಭಟನೆ

Spread the love

ಪಾಕ್ ಪರ ಘೋಷಣೆ ವಿಚಾರ:ಬೆಳ್ತಂಗಡಿ ಪೊಲೀಸ್ ಠಾಣೆ ಎದುರು ಎಸ್.ಡಿ.ಪಿ.ಐ ಕಾರ್ಯಕರ್ತರಿಂದ ಪ್ರತಿಭಟನೆ

ಬೆಳ್ತಂಗಡಿ: ಪಾಕ್ ಪರ ಬಿಜೆಪಿ ಕಾರ್ಯಕರ್ತರು ಘೋಷಣೆ ಅಸಲಿ ವಿಡಿಯೋ ವೈರಲ್ ಬಳಿಕ ನೈಜ ಆರೋಪಗಳ ವಿರುದ್ಧ ಕೇಸ್ ದಾಖಲಿಸುವಲ್ಲಿ ಮತ್ತು ಆರೋಪಿಗಳನ್ನು ಬಂಧಿಸುವಲ್ಲಿ ಬೆಳ್ತಂಗಡಿ ಪೊಲೀಸರು ಮೀನಾಮೇಷವನ್ನು ಮಾಡುತ್ತಿದ್ದು, ಘಟನೆಯನ್ನು ಖಂಡಿಸಿ ನೈಜ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಎಸ್ ಡಿಪಿಐ ಕಾರ್ಯಕರ್ತರು ಬೆಳ್ತಂಗಡಿ ಠಾಣೆ ಮುಂಭಾಗ ಧರಣಿ ಕುಳಿತಿದ್ದಾರೆ.

ಈ ವೇಳೆ ಮಾತನಾಡಿದ ಎಸ್.ಡಿ.ಪಿ.ಐ. ತಾಲೂಕು ಅಧ್ಯಕ್ಷ ಹೈದರ್ ನೀರ್ಸಾಲ್, ಪಾಕ್ ಪರ ಘೋಷಣೆ ಕೂಗಿ ಬಿಜೆಪಿ ಕಾರ್ಯಕರ್ತರನ್ನು ಬಂಧಿಸದೆ ಅಮಾಯಕರನ್ನು ಬಂಧಿಸಲಾಗಿದೆ. ರಾಜಕೀಯಕ್ಕೆ ಒತ್ತಡ ಬಳಸಿ ಎಸ್.ಡಿ.ಪಿ.ಐ. ಕಾರ್ಯಕರ್ತರನ್ನು ಬಂಧಿಸಲಾಗಿದೆ.

ಪೊಲೀಸರು ರಾಜಕೀಯ ಒತ್ತಡಕ್ಕೆ ಮಣಿದಿದ್ದಾರೆ. ನಮಗೆ ಉತ್ತರ ಬೇಕು. ನಾವು ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದೇವೆ. ಮೇಲಾಧಿಕಾರಿಗಳು ಬರುವವವರೆಗೂ ನಾವು ಕದಲುವುದಿಲ್ಲ ಎಂದರು. ಈ ವೇಳೆ ಶಾಸಕ ಹರೀಶ್ ಪೂಂಜ, ಸಂಸದ ನಳಿನ್ ಕುಮಾರ್ ಕಟಿಲ್ ವಿರುದ್ಧ ಘೋಷಣೆ ಕೂಗಿದರು.

ಎಸ್.ಡಿ.ಪಿ.ಐ. ರಾಷ್ಟ್ರೀಯ ಕಾರ್ಯದರ್ಶಿ ಮಾತನಾಡಿ, ಸಂವಿಧಾನಕ್ಕೆ ನಾವು ಗೌರವ ನೀಡುವವರು. ಸಂವಿಧಾನ ಬದ್ಧವಾಗಿ ಎಸ್.ಡಿ.ಪಿ.ಐ. ಕಾರ್ಯಕರ್ತರು ಎಸ್.ಡಿ.ಪಿ.ಐ. ಪಕ್ಷಕ್ಕೆ ಘೋಷಣೆ ಕೂಗಿದ್ದಾರೆ. ಆದರೆ ಅವರನ್ನು ವಿಡಿಯೋದಲ್ಲಿ ತಿರುಚಲಾಗಿದೆ. ಆದರೂ ಅಮಾಯಕರನ್ನು ಬಂಧಿಸಲಾಗಿದೆ ಎಂದು ಆರೋಪಿಸಿದರು.

ನೂರಕ್ಕೂ ಅಧಿಕ ಕಾರ್ಯಕರ್ತರು ಸ್ಥಳದಲ್ಲಿ ಜಮಾಯಿಸಿದ್ದರು. ಬೆಳ್ತಂಗಡಿ ಪೊಲೀಸ್ ವೃತ್ತನಿರೀಕ್ಷಕ ಸಂದೇಶ್ ಪಿ.ಜಿ., ಉಪನಿರೀಕ್ಷಕ ನಂದಕುಮಾರ್ ಎಂ.ಎಂ. ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.


Spread the love