ಪಾಠದ ಜೊತೆಗೆ ಆಟವೂ ಕೂಡ ಅಷ್ಟೇ ಮುಖ್ಯ: ಮಾರುತಿ

Spread the love

ಪಾಠದ ಜೊತೆಗೆ ಆಟವೂ ಕೂಡ ಅಷ್ಟೇ ಮುಖ್ಯ: ಮಾರುತಿ

ಕುಂದಾಪುರ: ಪಾಠದ ಜೊತೆಗೆ ಆಟವೂ ಕೂಡ ಅಷ್ಟೇ ಮುಖ್ಯವಾಗಿದೆ. ವಿದ್ಯಾರ್ಥಿಗಳು ಲವಲವಿಕೆಯಿಂದ ಭಾಗವಹಿಸಿದಾಗ ಆಟಕ್ಕೆ ಕಳೆ ಬರುತ್ತದೆ. ಸ್ಪರ್ಧಾಳುಗಳು ಆಟದ ಕೊನೆಯವರೆಗೂ ಉತ್ಸಾಹವನ್ನು ಕಳೆದುಕೊಳ್ಳದೆ ಹುರುಪಿನೊಂದಿಗೆ ಪ್ರೇಕ್ಷಕರನ್ನು ರೋಮಾಂಚನಗೊಳಿಸುವಂತೆ ಆಟವಾಡಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ  ಮಾರುತಿ ಹೇಳಿದರು.

ಅವರು ಕುಂದಾಪುರ ತಾಲ್ಲೂಕಿನ ಸುಣ್ಣಾರಿಯ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ಜರುಗಿದ ತಾಲ್ಲೂಕು ಮಟ್ಟದ ವಾಲಿಬಾಲ್ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು.

ಎಂ. ಮಹೇಶ್ ಹೆಗ್ಡೆ ಮಾತನಾಡಿ, ಶಿಕ್ಷಣ ಇಲಾಖೆಯು ನಮ್ಮ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ವಾಲಿಬಾಲ್ ಆಯೋಜಿಸಿದಕ್ಕೆ ಹೆಮ್ಮೆ ಎನಿಸುತ್ತದೆ. ಇಲ್ಲಿ ಆಟದಲ್ಲಿ ಯಾರೇ ಗೆಲ್ಲಲಿ ಯಾರೇ ಸೋಲಲಿ ನಮಗೆ ಭಾಗವಹಿಸಿದ ತೃಪ್ತಿ ಇರುತ್ತದೆ. ಸ್ಪರ್ಧಾತ್ಮಕ ದೃಷ್ಟಿಯಿಂದ ಆಡುವುದು ಸೂಕ್ತ. ಇದು ಜೀವನದಲ್ಲಿ ನಾವು ಬೆಳೆಯಲು ಸಹಕಾರಿಯಾಗುತ್ತದೆ. ಇಲ್ಲಿ ಆಡಿದ ವಿದ್ಯಾರ್ಥಿಗಳು ತಾಲ್ಲೂಕು ಮಟ್ಟದಿಂದ ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರಮಟ್ಟಕ್ಕೆ ಆಡಬೇಕೆಂದು ಹರಸಿದರು.

ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಹಾಗೂ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್‍ನ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಸುಜ್ಞಾನ್ ಎಜುಕೇಶನಲ್ ಟ್ರಸ್ಟ್‍ನ ಖಜಾಂಚಿ ಭರತ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪಚಂದ್ರ ಶೆಟ್ಟಿ, ಉಡುಪಿ ಜಿಲ್ಲಾ ದೈಹಿಕ ನಿರ್ದೇಶಕ ಜೀವನ ಕುಮಾರ್ ಶೆಟ್ಟಿ, ಕ್ರೀಡಾ ಸಂಯೋಜಕ ರಾಮ ಶೆಟ್ಟಿ, ದೈಹಿಕ ಶಿಕ್ಷಣ ನಿರ್ದೇಶಕ ನಾಗರಾಜ್ ಶೆಟ್ಟಿ ಮೊದಲಾದವರು ಇದ್ದರು.

ದೈಹಿಕ ಶಿಕ್ಷಣ ನಿರ್ದೇಶಕಿ ಜಯಲತಾ ಬಹುಮಾನ ವಿಜೇತರ ಪಟ್ಟಿಯನ್ನು ವಾಚಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಸತೀಶ್ ಕುಮಾರ್ ವಂದನಾರ್ಪಣೆಗೈದರು. ಆಂಗ್ಲಭಾಷಾ ಉಪನ್ಯಾಸಕÀ ಪ್ರಕಾಶ್ ಆಚಾರ್ಯ ಹಾಗೂ ಶರತ್ ಕುಮಾರ್ ಕಾರ್ಯಕ್ರಮವನ್ನು ನಿರ್ವಹಿಸಿದರು. ಅಭಿ ಪಾಂಡೇಶ್ವರ ಅವರು ವೀಕ್ಷಕ ವಿವರಣೆಯನ್ನು ನೀಡಿದರು.

ಸ್ಪರ್ಧೆಯ ಫಲಿತಾಂಶ: ಕುಂದಾಪುರ ತಾಲ್ಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಾಲಕರÀ ವಿಭಾಗದಲ್ಲಿ ಶಾರದ ಕಾಲೇಜು ಬಸ್ರೂರು ಪ್ರಥಮ ಸ್ಥಾನ ಹಾಗೂ ವೆಂಕಟರಮಣ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಗಳಿಸಿದ್ದಾರೆ. ಬಾಲಕಿಯರ ವಿಭಾಗದಲ್ಲಿ ಸರ್ಕಾರಿ ಪ.ಪೂ ಕಾಲೇಜು ಕೋಟೇಶ್ವರ ಪ್ರಥಮ ಸ್ಥಾನ ಮತ್ತು ಭಂಡಾರ್‍ಕರ್ಸ್ ಕಾಲೇಜು ದ್ವಿತೀಯ ಸ್ಥಾನ ಪಡೆದುಕೊಂಡರು. ಪಂದ್ಯಾಟದಲ್ಲಿ ಒಟ್ಟು 25 ತಂಡಗಳು ಭಾಗವಹಿಸಿದ್ದು ಎಕ್ಸಲೆಂಟ್ ಸಂಸ್ಥೆಯ ಅನುಜ್ ಕುಮಾರ್ ಜೆ ಎಸ್ ಜಿಲ್ಲಾ ಮಟ್ಟದ ತಂಡಕ್ಕೆ ಆಯ್ಕೆಯಾಗಿದ್ದಾರೆ.


Spread the love

Leave a Reply

Please enter your comment!
Please enter your name here