Spread the love
ಪಾಣೆಮಂಗಳೂರು | ಐರಾವತ ಬಸ್ ಢಿಕ್ಕಿ: ದ್ವಿಚಕ್ರ ವಾಹನ ಸವಾರ ಮೃತ್ಯು
ಬಂಟ್ವಾಳ: ಕೆಎಸ್ಸಾರ್ಟಿಸಿ ಐರಾವತ ಬಸ್ಸೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾ.ಹೆ. ಪಾಣೆಮಂಗಳೂರು – ನೆಹರೂ ನಗರದಲ್ಲಿ ರವಿವಾರ ತಡರಾತ್ರಿ ಸಂಭವಿಸಿದೆ.
ಮಂಗಳೂರು ನಿವಾಸಿ ಆಲಿಸ್ಟರ್ ಡಿಸೋಜ (24) ಮೃತಪಟ್ಟವರು. ಅವರು ವಿಟ್ಲದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಂಗಳೂರಿಗೆ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಪಾಣೆಮಂಗಳೂರು – ನೆಹರೂ ನಗರದಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಐರಾವತ ಬಸ್ ಎದುರಿದ್ದ ವಾಹನವೊಂದನ್ನು ಹಿಂದಿಕ್ಕುವ ಭರದಲ್ಲಿ ಮುಖಾಮುಖಿ ಢಿಕ್ಕಿಯಾಗಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಬಂಟ್ವಾಳ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Spread the love