
ಪಾನ್-ಆಧಾರ್ ಲಿಂಕ್ ಮಾಡುವ ಗಡುವು ವಿಸ್ತರಿಸಿದ ಸರ್ಕಾರ
ಹೊಸದಿಲ್ಲಿ: ಪಾನ್ ಮತ್ತು ಆಧಾರ್ ಲಿಂಕ್ ಮಾಡದೆ ಕಂಗಾಲಾಗಿದ್ದವರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ತೆರಿಗೆದಾರರಿಗೆ ಇನ್ನೂ ಸ್ವಲ್ಪ ಸಮಯವನ್ನು ಒದಗಿಸುವ ಸಲುವಾಗಿ, ಪ್ಯಾನ್ ಮತ್ತು ಆಧಾರ್ ಲಿಂಕ್ ಮಾಡುವ ದಿನಾಂಕವನ್ನು ಜೂನ್ 30, 2023 ರವರೆಗೆ ವಿಸ್ತರಿಸಲಾಗಿದೆ. ಈ ಬಗ್ಗೆ ಆದಾಯ ತೆರಿಗೆ ಇಲಾಖೆ ಪ್ರಕಟಣೆ ಹೊರಡಿಸಿದೆ.
In order to provide some more time to the taxpayers, the date for linking PAN & Aadhaar has been extended to 30th June, 2023, whereby persons can intimate their Aadhaar to the prescribed authority for PAN-Aadhaar linking without facing repercussions.
(1/2) pic.twitter.com/EE9VEamJKh— Income Tax India (@IncomeTaxIndia) March 28, 2023
2023ರ ಜುಲೈ 1ರಿಂದ, ಲಿಂಕ್ ಮಾಡದ ಪಾನ್ ಕಾರ್ಡ್ ನಿಷ್ಕ್ರಿಯಗೊಳ್ಳುತ್ತದೆ. ಇದನ್ನು 30 ದಿನಗಳ ಒಳಗೆ 1000 ರೂ ಶುಲ್ಕ ಕಟ್ಟಿ ಲಿಂಕ್ ಮಾಡಿಸಿ ಮತ್ತೆ ಕಾರ್ಯಗತಗೊಳಿಸಬಹುದು ಎಂದು ಇಲಾಖೆ ಸೂಚಿಸಿದೆ.
ಈ ಪ್ರಕ್ರಿಯೆಯಿಂದ 80 ವರ್ಷ ದಾಟಿದವರು, ಅನಿವಾಸಿ ಭಾರತೀಯರು ಸೇರಿ ಇನ್ನೂ ಹಲ ವಿಭಾಗಗಳಲ್ಲಿ ಬರುವ ಜನರಿಗೆ ವಿನಾಯ್ತಿ ನೀಡಲಾಗಿದೆ.