ಪಿಯುಸಿ ಫಲಿತಾಂಶದಲ್ಲಿ ದ.ಕ. ಪ್ರಥಮ: ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅಭಿನಂದನೆ

Spread the love

ಪಿಯುಸಿ ಫಲಿತಾಂಶದಲ್ಲಿ ದ.ಕ. ಪ್ರಥಮ: ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅಭಿನಂದನೆ

ಮಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿರುವುದಕ್ಕೆ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಜಿಲ್ಲೆಯ ವಿದ್ಯಾರ್ಥಿಗಳು ಹಿಂದಿನಿಂದಲೂ ಪರಿಶ್ರಮದ ಅಧ್ಯಯನ ಮಾಡಿ, ಜಿಲ್ಲೆಯಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಕಾರಣರಾಗಿದ್ದಾರೆ. ಉತ್ತಮ ಫಲಿತಾಂಶಕ್ಕೆ ಕೈಜೋಡಿಸಿದ ಹೆತ್ತವರು, ಶಿಕ್ಷಕರು, ಪ್ರಾಂಶುಪಾಲರು, ಕಾಲೇಜು ಸಮಿತಿ, ಪದವಿಪೂರ್ವ ಶಿಕ್ಷಣ ಇಲಾಖೆಗೆ ಅಭಿನಂದನೆಗಳು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.


Spread the love