ಪಿಯು ವಿದ್ಯಾರ್ಥಿಗೆ ಚೂರಿಯಿಂದ ಇರಿದು ಹಲ್ಲೆ ನಡೆಸಿದ ಅಪ್ರಾಪ್ತ ಬಾಲಕರು

Spread the love

ಪಿಯು ವಿದ್ಯಾರ್ಥಿಗೆ ಚೂರಿಯಿಂದ ಇರಿದು ಹಲ್ಲೆ ನಡೆಸಿದ ಅಪ್ರಾಪ್ತ ಬಾಲಕರು

ಮಂಗಳೂರು: ವಿದ್ಯಾರ್ಥಿಗೆ ಇನ್ನೊಂದು ಕಾಲೇಜಿನ ವಿದ್ಯಾರ್ಥಿಗಳು ಚೂರಿಯಿಂದ ಇರಿದ ಘಟನೆ ನಗರ ಖಾಸಗಿ ಕಾಲೇಜಿನಲ್ಲಿ ನಡೆದಿದೆ

ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ನಂತೂರು ಪದವು ಬಳಿಯ ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ 17 ವರ್ಷ ವಯಸ್ಸಿನ ವಿದ್ಯಾರ್ಥಿಗೆ ಮಂಗಳೂರಿನ ಇನ್ನೊಂದು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಚೂರಿಯಿಂದ ಇರಿದು ಹಲ್ಲೆ ನಡೆಸಿದ್ದು ಈ ಬಗ್ಗೆ ವಿದ್ಯಾರ್ಥಿಗಳನ್ನು ಮತ್ತು ಅವರ ಪೋಷಕರನ್ನು ಠಾಣೆಗೆ ಕರೆದು ವಿಚಾರಣೆ ನಡೆಸಲಾಗಿದೆ.

ಸದರಿ ಇಬ್ಬರು ಬಾಲಕರು ಪಚ್ಚನಾಡಿ ಮತ್ತು ಉಳ್ಳಾಲದ ಉಳಿಯ ನಿವಾಸಿಗಳಾಗಿದ್ದು, ಸದರಿ ಬಾಲಕರನ್ನು ಪೋಷಕರೊಂದಿಗೆ ವಿಚಾರಿಸಿ ಕಾನೂನು ಕ್ರಮ ಕೈಗೊಂಡು, ಕಾನೂನು ಸಂಘರ್ಷಕ್ಕೊಳಾಗದ ಬಾಲಕರ ವಿರುದ್ಧ ಮಾನ್ಯ ಬಾಲ ನ್ಯಾಯ ಮಂಡಳಿ ರವರಿಗೆ ಸೂಕ್ತ ವರದಿಯನ್ನು ಸಲ್ಲಿಸಲಾಗಿದೆ.

ಈ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

Leave a Reply

Please enter your comment!
Please enter your name here