ಪಿಲಿಕುಳ: ಉಚಿತ ವೈದ್ಯಕೀಯ ತಪಾಸಣಾ ಶಿಬಿರ
ಮಂಗಳೂರು: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ, ಹಿಂದು ಕುಷ್ಠ ನಿವಾರಣೆ ಸಂಘ, ವೆನ್ಲಾಕ್ ಆಸ್ಪತ್ರೆ ಮಂಗಳೂರು ಹಾಗೂ ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಇವರ ಸಹಯೋಗದೊಂದಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಬುಧವಾರ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಲಾಯಿತು.
ಶಿಬಿರದಲ್ಲಿ ವಿವಿಧ ವಿಭಾಗಗಳ ತಜ್ಞ ವೈದ್ಯರು ಸಿಬ್ಬಂದಿಗಳ ಆರೋಗ್ಯ ತಪಾಸಣೆ ನಡೆಸಿ, ಅಗತ್ಯ ಸಲಹೆ ಹಾಗೂ ಚಿಕಿತ್ಸಾ ಮಾರ್ಗದರ್ಶನ ನೀಡಿದರು. ರಕ್ತದೊತ್ತಡ, ಮಧುಮೇಹ, ಚರ್ಮರೋಗ, ಕಣ್ಣಿನ ತಪಾಸಣೆ ಸೇರಿದಂತೆ ವಿವಿಧ ಆರೋಗ್ಯ ಪರೀಕ್ಷೆಗಳನ್ನು ಉಚಿತವಾಗಿ ನಡೆಸಲಾಯಿತು.
ಶಿಬಿರದಲ್ಲಿ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಕೆ. ಶ್ರೀಕಾಂತ್ ರಾವ್, ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಡಾ.ಆಮಿತ್, ಆಪ್ತ ಸಮಾಲೋಚಕಿ ಗೀತಾ ರೈ, ಟೆಕ್ನಿಶಿಯನ್ ಕಲ್ಲೇಶ್, ಹಿಂದು ಕುಷ್ಠ ನಿವಾರಣ್ ಸಂಘದ ದಿನೇಶ್ ಮತ್ತು ದೀಕ್ಷಿತಾ, ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ತಜ್ಞರು ಉಪಸ್ಥಿತರಿದ್ದರು.













