ಪಿಲಿಕುಳ ಗಾಲ್ಫ್ ಕ್ಲಬ್ ಮರ ತೆರವು: ಎ.17 ರಂದು ಸಾರ್ವಜನಿಕ ಸಭೆ 

Spread the love

ಪಿಲಿಕುಳ ಗಾಲ್ಫ್ ಕ್ಲಬ್ ಮರ ತೆರವು: ಎ.17 ರಂದು ಸಾರ್ವಜನಿಕ ಸಭೆ 

ಮಂಗಳೂರು: ಮಂಗಳೂರು ತಾಲೂಕು ಮೂಡುಶೆಡ್ಡೆ ಗ್ರಾಮದ ಪಿಲಿಕುಳ ಗಾಲ್ಫ್ ಕ್ಲಬ್ ಆವರಣದಲ್ಲಿ ಗಾಲ್ಫ್ ಅಕಾಡೆಮಿ ಮತ್ತು ನೀರಿನ ಜಲಾಶಯ ನಿರ್ಮಾಣಕ್ಕೆ ಅಡಚಣೆಯಾಗಿರುವ ಮರಗಳನ್ನು ಕಡಿಯಲು ಅರಣ್ಯ ಇಲಾಖೆಯ ಅನುಮತಿ ಕೋರಲಾಗಿದೆ.

50 ಕ್ಕಿಂತ ಹೆಚ್ಚು ಮರಗಳನ್ನು ಸ್ಥಳದಲ್ಲಿ ಗುರುತಿಸಿದ್ದು, ಸಾರ್ವಜನಿಕರ ಅಹವಾಲು ಸ್ವೀಕರಿಸಿ ಮುಂದಿನ ಕ್ರಮ ಕೈಗೊಳ್ಳಬೇಕಾಗಿರುವುದರಿಂದ ಎಪ್ರಿಲ್ 16 ರಂದು ನಿಗಧಿಯಾಗಿದ್ದ ಸಭೆಯನ್ನು ಮುಂದೂಡಲಾಗಿದ್ದು, ಎಪ್ರಿಲ್ 17 ರಂದು ಬೆಳಿಗ್ಗೆ 11 ಗಂಟೆಗೆ ಮೂಡುಶೆಡ್ಡೆ ಗ್ರಾಮದ ಪಿಲಿಕುಳ ಗಾಲ್ಫ್ ಕ್ಲಬ್ ಆವರಣದಲ್ಲಿ ಕರೆಯಲಾಗಿದೆ.

ಈ ಬಗ್ಗೆ ಸಾರ್ವಜನಿಕರಿಂದ ಅಹವಾಲುಗಳಿದ್ದಲ್ಲಿ ಖುದ್ದಾಗಿ ಸಭೆಯಲ್ಲಿ ಹಾಜರಾಗಿ ಲಿಖಿತ ರೂಪದಲ್ಲಿ ಅಭಿಪ್ರಾಯವನ್ನು ಸಲ್ಲಿಸಬಹುದು ಎಂದು ವೃಕ್ಷಾಧಿಕಾರಿ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments