ಪುಂಜಾಲಕಟ್ಟೆ: ಆರೆಸ್ಸೆಸ್ ವಿರುದ್ಧ ಆಕ್ಷೇಪಾರ್ಹ ರಸ್ತೆ ಬರಹ; ತಪ್ಪಿತಸ್ಥರ ಬಂಧನಕ್ಕೆ ಆಗ್ರಹ

Spread the love

ಪುಂಜಾಲಕಟ್ಟೆ: ಆರೆಸ್ಸೆಸ್ ವಿರುದ್ಧ ಆಕ್ಷೇಪಾರ್ಹ ರಸ್ತೆ ಬರಹ; ತಪ್ಪಿತಸ್ಥರ ಬಂಧನಕ್ಕೆ ಆಗ್ರಹ
 
ಪುಂಜಾಲಕಟ್ಟೆ: ಆರೆಸ್ಸೆಸ್ ವಿರುದ್ಧ ರಸ್ತೆ ಮೇಲೆ ಆಕ್ಷೇಪಾರ್ಹ ಬರಹ ಬರೆದ ಘಟನೆ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ನಯನಾಡು ಸಮೀಪದ ಸ್ನೇಹ ಗಿರಿ ಎಂಬಲ್ಲಿ ಮಂಗಳವಾರ ಬೆಳಗ್ಗೆ ಕಂಡು ಬಂದಿದೆ.

ಯಾರೋ ಅಪರಿಚಿತರು ರಸ್ತೆಯಲ್ಲಿ ಆರೆಸ್ಸೆಸ್ ವಿರುದ್ಧ ಬಹಿರಂಗ ಬೆದರಿಕೆ ಹಾಕಿದ್ದು, ಚಡ್ಡಿಗಳೇ ಎಚ್ಚರ, ನಾವು ಪಿಎಫ್ ಐ ಮರಳಿ ಬರುತ್ತೇವೆ ಎಂದು ಬರೆದಿದ್ದಾರೆ.

ಈ ಬಗ್ಗೆ ಸ್ಥಳೀಯರು ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ಈ ಬಗ್ಗೆ ದೂರು ನೀಡಿ ತತ್ ಕ್ಷಣಕ್ಕೆ ಕ್ರಮ ಜರುಗಿಸಿ ತಪ್ಪಿತಸ್ಥರನ್ನು ಬಂಧಿಸುವಂತೆ ಆಗ್ರಹಿದ್ದಾರೆ.

ಪುಂಜಾಲಕಟ್ಟೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.


Spread the love