ಪುಂಜಾಲಕಟ್ಟೆ : ಕೊಟ್ಟಿಯೂರು ದೇವಸ್ಥಾನಕ್ಕೆ ತೆರಳಿದ್ದ ಯುವಕ ನಾಪತ್ತೆ
ಮಂಗಳೂರು: ರತನ್ ಕುಮಾರ್ (31) ಎಂಬವರು ಜೂನ್ 3 ರಂದು ಕೊಟ್ಟಿಯೂರು ದೇವಸ್ಥಾನಕ್ಕೆ ಹೋಗುವುದಾಗಿ ತಿಳಿಸಿ ಮನೆಯಿಂದ ಹೊರಟು ಹೋಗಿದ್ದು, ಈವರೆಗೂ ಮನೆಗೆ ವಾಪಾಸ್ಸು ಬಾರದೆ ಕಾಣೆಯಾಗಿದ್ದಾರೆ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಣೆಯಾದವರ ಚಹರೆ: ಎತ್ತರ ಸುಮಾರು 5 ಅಡಿ, ಎಣ್ಣೆ ಕಪ್ಪು ಮೈಬಣ್ಣ ಹೊಂದಿರುತ್ತಾರೆ. ಮನೆಯಿಂದ ತೆರಳಿದ ದಿನ ಕಪ್ಪು ಪ್ಯಾಂಟ್ ಮತ್ತು ಉದ್ದ ತೋಳಿನ ಆಕಾಶ ನೀಲಿ ಬಣ್ಣದ ಶರ್ಟ್ ಧರಿಸಿದ್ದರು. ಕನ್ನಡ, ತುಳು, ಹಿಂದಿ ಭಾಷೆ ಮಾತನಾಡುತ್ತಾರೆ.
ಕಾಣೆಯಾದವರ ಬಗ್ಗೆ ಮಾಹಿತಿ ಪತ್ತೆಯಾದಲ್ಲಿ ಪುಂಜಾಲಕಟ್ಟೆ ಪೊಲೀಸ್ ಠಾಣೆ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
