ಪುಣೆ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ಯಾಂಕರ್ ಸ್ಫೋಟ; 4 ಸಾವು

Spread the love

ಪುಣೆ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ಯಾಂಕರ್ ಸ್ಫೋಟ; 4 ಸಾವು
 

ಪುಣೆ: ಪುಣೆ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ರಾಸಾಯನಿಕ ತುಂಬಿದ ಟ್ಯಾಂಕರ್ ಅಪಘಾತಕ್ಕೀಡಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ನಾಲ್ಕು ಮಂದಿ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಕಿ ಹೊತ್ತಿಕೊಂಡ ಬೆನ್ನಲ್ಲೇ ಟ್ಯಾಂಕರ್ ಸ್ಫೋಟಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಲೋನಾವಾಲಾ ಮತ್ತು ಖಂಡಾಲಾ ನಡುವೆ ಎಕ್ಸ್‌ಪ್ರೆಸ್‌ವೇಯಲ್ಲಿ ಈ ಅವಘಡ ಸಂಭವಿಸಿದೆ.

ಸ್ಫೋಟದ ತೀವ್ರತೆ ಎಷ್ಟರ ಮಟ್ಟಿಗೆ ಇತ್ತೆಂದರೆ ಹೆದ್ದಾರಿಯಲ್ಲಿ ಸಾಗುತ್ತಿದ್ದ ಇತರ ವಾಹನಗಳಿಗೆ ಬೆಂಕಿಯ ಜ್ವಾಲೆ ಅಪ್ಪಳಿಸಿದೆ.

ಕೊನೆಗೂ ಬೆಂಕಿ ನಂದಿಸುವಲ್ಲಿ ಅಗ್ನಿಶಾಮಕದಳ ಯಶಸ್ವಿಯಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.


Spread the love