ಪುತ್ತಿಲ ಪರಿವಾರ ಮುಖ್ಯಸ್ಥ ಅರುಣ್ ಕುಮಾರ್ ಪುತ್ತಿಲಗೆ ಗಡಿಪಾರು ನೊಟೀಸ್

Spread the love

ಪುತ್ತಿಲ ಪರಿವಾರ ಮುಖ್ಯಸ್ಥ ಅರುಣ್ ಕುಮಾರ್ ಪುತ್ತಿಲಗೆ ಗಡಿಪಾರು ನೊಟೀಸ್

ಮಂಗಳೂರು: ಬಿಜೆಪಿ ಮುಖಂಡ ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ ಅವರ ಗಡಿಪಾರಿಗೆ ಸಿದ್ದತೆ ನಡೆಯುತ್ತಿದ್ದು, ಈ ವಿಚಾರಕ್ಕೆ ಸಂಬಂಧಪಟ್ಟಂತೆ ಜೂನ್ 6 ರಂದು ವಿಚಾರಣೆ ಹಾಜರಾಗಲು ಪುತ್ತಿಲರಿಗೆ ನೊಟೀಸ್ ನೀಡಲಾಗಿದೆ.

ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳ ನಡುವೆ ಇದೀಗ ಪುತ್ತಿಲ ಪರಿವಾರ ಮುಖ್ಯಸ್ಥ ಅರುಣ್ ಕುಮಾರ್ ಪುತ್ತಿಲ ಗಡಿಪಾರಿಗೆ ನಿರ್ಧರಿಸಲಾಗಿದೆ. ಪುತ್ತಿಲ ಅವರನ್ನು ಪೊಲೀಸ್ ಕಾಯ್ದೆ ಕಲಂ 55ರ ಅನ್ವಯ ದಕ್ಷಿಣಕನ್ನಡ ಜಿಲ್ಲೆಯಿಂದ ಕಲಬುರಗಿ ಜಿಲ್ಲೆಯ ಶಹಬಾದ ಪೋಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರಿಗೆ ಆದೇಶ ಹೊರಡಿಸುವ ಕುರಿತಂತೆ ಜೂನ್ 6 ರಂದು ವಿಚಾರಣೆ ನಿಗದಿ ಪಡಿಸಲಾಗಿದೆ.

ಈ ಕುರಿತಂತೆ ವಿಚಾರಣೆಗೆ ಆಗಮಿಸುವಂತೆ ಅರುಣ್ ಕುಮಾರ್ ಪುತ್ತಿಲರಿಗೆ ಪುತ್ತೂರು ಸಹಾಯಕ ಆಯುಕ್ತರ ಕಛೇರಿಯಿಂದ ನೋಟೀಸ್ ನೀಡಲಾಗಿದೆ. ವಿಚಾರಣೆಗೆ ಹಾಜರಾಗದಿದ್ದಲ್ಲಿ ಏಕಪಕ್ಷಿಯವಾಗಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ನೊಟೀಸ್ ನಲ್ಲಿ ತಿಳಿಸಲಾಗಿದೆ.


Spread the love
Subscribe
Notify of

0 Comments
Inline Feedbacks
View all comments