ಪುತ್ತೂರು: ಅಪ್ರಾಪ್ತಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ

Spread the love

ಪುತ್ತೂರು: ಅಪ್ರಾಪ್ತಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ

ಪುತ್ತೂರು: ಪುತ್ತೂರಿನಲ್ಲಿ ಹಾಸ್ಟೆಲ್‍ನಲ್ಲಿದ್ದು ಕಾಲೇಜು ವ್ಯಾಸಂಗ ನಡೆಸುತ್ತಿದ್ದ ಸುಳ್ಯದ ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿಯಲ್ಲಿ ಸುಳ್ಯ ತಾಲೂಕಿನ ಐವರ್ನಾಡು ನಿವಾಸಿ ಯುವಕನ ವಿರುದ್ದ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಿಸಿ ಶನಿವಾರ ಬಂಧಿಸಲಾಗಿದೆ.

ಸುಳ್ಯ ತಾಲೂಕಿನ ಐವರ್ನಾಡು ನಿವಾಸಿ ರಕ್ಷಿತ್ ಎಂಬಾತ ಪೋಕ್ಸೋ ಪ್ರಕರಣದ ಅಡಿ ಬಂಧಿತನಾದ ಆರೋಪಿ.

ಘಟನೆ ಬಗ್ಗೆ ಬಾಲಕಿಯು ನೀಡಿದ ದೂರಿನಂತೆ ಪುತ್ತೂರು ಮಹಿಳಾ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.


Spread the love