ಪುತ್ತೂರು: ಖಾಸಗಿ ಆಸ್ಪತ್ರೆಯಲ್ಲಿ ಬೆಂಕಿ ಆಕಸ್ಮಿಕ; ಅಪಾಯದಿಂದ ಪಾರಾದ ರೋಗಿಗಳು

Spread the love

ಪುತ್ತೂರು: ಖಾಸಗಿ ಆಸ್ಪತ್ರೆಯಲ್ಲಿ ಬೆಂಕಿ ಆಕಸ್ಮಿಕ; ಅಪಾಯದಿಂದ ಪಾರಾದ ರೋಗಿಗಳು

ಪುತ್ತೂರು: ಖಾಸಗೀ ಆಸ್ಪತ್ರೆಯ ವಿದ್ಯುತ್ ಸಂಪರ್ಕ ವ್ಯವಸ್ಥೆಯಲ್ಲಿ ಬುಧವಾರ ಬೆಳಗ್ಗಿನ ಜಾವ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ಸಿಯಾಗಿದ್ದಾರೆ.

ಬೊಳುವಾರಿನ ಮುಖ್ಯ ರಸ್ತೆಯಲ್ಲಿರುವ ಖಾಸಗೀ ಆಸ್ಪತ್ರೆಯಲ್ಲಿ ಬೆಳಗ್ಗಿನ ಜಾವ 5ಗಂಟೆ ಸುಮಾರಿಗೆ ವಿದ್ಯುತ್ ಮೀಟರ್ ಬೋರ್ಡ್‌ನ ಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿದೆ. ಜಂಕ್ಷನ್ ಬಾಕ್ಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಆಸ್ಪತ್ರೆಯ ತುಂಬಾ ಹೊಗೆ ತುಂಬಿಕೊಂಡಿದ್ದು, ತಕ್ಷಣ ಆಗ್ನಿಶಾಮಕ ದಳದವರು ಆಗಮಿಸಿ ಮುನ್ನೆಚ್ಚರಿಕೆಯನ್ನು ತೆಗೆದುಕೊಂಡಿದ್ದಾರೆ. ರೋಗಿಗಳಿಗೆ ಯಾವುದೇ ಸಮಸ್ಯೆಯಾಗಿಲ್ಲ ಎಂದು ಹೇಳಲಾಗಿದೆ.

ಕಾರ್ಯಚರಣೆಯಲ್ಲಿ ಅಗ್ನಿಶಾಮಕ ಠಾಣಾಧಿಕಾರಿ ಶಂಕರ ಸಹಾಯಕ, ಪ್ರಮುಖ ಅಗ್ನಿಶಾಮಕ ಎಂ. ಪಿ. ಲೀಲಾಧರ, ಅಗ್ನಿಶಾಮಕ ಚಾಲಕ ಮೋಹನ ಜಾಧವ, ಅಗ್ನಿಶಾಮಕರಾದ ಪಾಂಡುರಂಗ ವಾಲಿಕಾರ, ಜಾಫರ್ ಅಹ್ಮದ್ ನಧಾಫ್, ಸಿದ್ದಾರೂಢ ದೊಡ್ಡಲಿಂಗಣ್ಣವರ ಭಾಗವಹಿಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments