ಪುತ್ತೂರು: ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ
ಪುತ್ತೂರು: 7 ವರ್ಷಗಳ ಹಿಂದೆ ಪ್ರಕರಣವೊಂದಕ್ಕೆ ಸಂಬಂಧಿಸಿ ಬಂಧಿತನಾಗಿದ್ದು ಜಾಮೀನಿನ ಮೇಲೆ ಬಿಡುಗಡೆಗೊಂಡು ಬಳಿಕ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಯನ್ನು ಶುಕ್ರವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಕೊಡಗು ಜಿಲ್ಲೆಯ ಸೋಮವಾರ ಪೇಟೆ ನಿವಾಸಿ ಹನೀಫ್(55) ಬಂಧಿತ ಆರೋಪಿ.
ಆರೋಪಿ 2018ರಲ್ಲಿ ಬಂಧಿತನಾಗಿದ್ದು, ಬಳಿಕ ಜಾಮೀನು ಪಡೆದು, ನ್ಯಾಯಾಲಯದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಈತನನ್ನು ಕೊಡಗು ಜಿಲ್ಲೆಯ ಕುಶಾಲನಗರ ಎಂಬಲ್ಲಿ ಪತ್ತೆ ಮಾಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಆರೋಪಿತನ ವಿರುದ್ದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕಲಂ: 269 ಬಿ.ಎನ್ ಎಸ್ ರಂತೆ ಪ್ರಕರಣ ದಾಖಲು ಮಾಡಲಾ ಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಆರೋಪಿತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.