ಪುತ್ತೂರು ದೇವಳದ ಕೆರೆಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ

Spread the love

ಪುತ್ತೂರು ದೇವಳದ ಕೆರೆಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ

ಪುತ್ತೂರು : ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆಯಲ್ಲಿ ಅಪರಿಚಿತ ಮಹಿಳೆಯೊಬ್ಬರ ಶವ ಭಾನುವಾರ ಪತ್ತೆಯಾಗಿದೆ.

ಮೃತದೇಹವನ್ನು ಅಗ್ನಿಶಾಮಕ ದಳದವರು ಆಗಮಿಸಿ ಕೆರೆಯಿಂದ ಮೇಲಕ್ಕೆತ್ತಿದ್ದು, ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ದೇರಳಕಟ್ಟೆ ಆಸ್ಪತ್ರೆಗೆ ಸಾಗಿಸಲಾಗಿದೆ.

ಸ್ಥಳಕ್ಕೆ ಪುತ್ತೂರು ನಗರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕ ಎಸ್ ಐ ಅಜಯ್ ಡಿ ಎನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮಹಿಳೆಯ ಬಗ್ಗೆ ಪರಿಚಯ ಇರುವುವವರು ಪುತ್ತೂರು ನಗರ ಠಾಣೆ ದೂರವಾಣಿ ಸಂಖ್ಯೆ 08251-230555 ಸಂಪರ್ಕಿಸಲು ಕೋರಲಾಗಿದೆ.


Spread the love