ಪುತ್ತೂರು | ಬಸ್- ಬೈಕ್ ಮಧ್ಯೆ ಢಿಕ್ಕಿ: ಬೈಕ್ ಸವಾರ ತಂದೆ ಮೃತ್ಯು, ಮಗ ಗಂಭೀರ

Spread the love

ಪುತ್ತೂರು | ಬಸ್- ಬೈಕ್ ಮಧ್ಯೆ ಢಿಕ್ಕಿ: ಬೈಕ್ ಸವಾರ ತಂದೆ ಮೃತ್ಯು, ಮಗ ಗಂಭೀರ

ಪುತ್ತೂರು: ಕೆಎಸ್ಸಾರ್ಟಿಸಿ ಬಸ್ ಮತ್ತು ಬೈಕ್ ಮಧ್ಯೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ತಂದೆ ಮೃತಪಟ್ಟು ಮಗ ಗಂಭೀರ ಗಾಯಗೊಂಡ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಬಕ ಸಮೀಪದ ಕುವೆತ್ತಿಲ ಎಂಬಲ್ಲಿ ರವಿವಾರ ನಡೆದಿದೆ.

ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನಿವಾಸಿ ಅರುಣ್ ಕುಲಾಲ್ ಮೃತಪಟ್ಟವರು. ಅವರ ಪುತ್ರ ಧ್ಯಾನ್ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಪುತ್ತೂರಿನಿಂದ ಮಂಗಳೂರಿನ ಕಡೆಗೆ ಹೋಗುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮತ್ತು ಎದುರು ಭಾಗದಿಂದ ಆಗಮಿಸುತ್ತಿದ್ದ ಬೈಕ್ ಮಧ್ಯೆ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಢಿಕ್ಕಿಯ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟ ಇಬ್ಬರೂ ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅರುಣ್ ಕುಲಾಲ್ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಕೊನೆಯುಸಿರೆಳೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಅಪಘಾತದ ಪರಿಣಾಮವಾಗಿ ಮಾಣಿ-ಮೈಸೂರು ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಗಿತ್ತು. ರಸ್ತೆಯ ಎರಡೂ ಬದಿಗಳಲ್ಲಿ ವಾಹನಗಳು ಕಿಲೋಮೀಟರ್ ಗಟ್ಟಲೆ ಸಾಲುಗಟ್ಟಿ ನಿಂತಿದ್ದವು. ಪುತ್ತೂರು ಸಂಚಾರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.


Spread the love