ಪುತ್ತೂರು: ಬೈಕ್ ಅಪಘಾತ – ಸವಾರ ಸಾವು

Spread the love

ಪುತ್ತೂರು: ಬೈಕ್ ಅಪಘಾತ – ಸವಾರ ಸಾವು
 

ಪುತ್ತೂರು: ಉಪ್ಪಿನಂಗಡಿ ಪುತ್ತೂರು ರಸ್ತೆಯ ಕೆಮ್ಮಾಯಿ ಪೆಟ್ರೋಲ್ ಬಂಕ್ ಬಳಿ ನಿಯಂತ್ರಣ ತಪ್ಪಿ ಬೈಕ್ ಅಪಘಾತಕ್ಕೆ ಈಡಾಗಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರವಿವಾರ ರಾತ್ರಿ ಸಂಭವಿಸಿದೆ.

ಸೇಡಿಯಾಪು ಬಳಿಯ ನಿವಾಸಿ ಚೈತ್ರೇಶ್ ಯಾನೆ ಚರಣ್ (19) ಮೃತ ಬೈಕ್ ಸವಾರ.

ಟರ್ನ್ ಮಾಡುವ ವೇಳೆ ನಿಯಂತ್ರಣ ತಪ್ಪಿ ಅಪಘಾತವಾಗಿದೆ. ಚೈತ್ರೇಶ್ ಬೈಕ್ ಖರೀದಿಸಿ ಕೇವಲ ಒಂದು ತಿಂಗಳಷ್ಟೇ ಆಗಿದೆನ್ನಲಾಗಿದೆ.

ಸ್ಥಳಕ್ಕೆ ಪುತ್ತೂರು ಸಂಚಾರ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.


Spread the love