ಪುತ್ತೂರು : ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮೂವರ ಬಂಧನ

ಪುತ್ತೂರು : ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮೂವರ ಬಂಧನ

ಮಂಗಳೂರು: ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮೂವರನ್ನು ಪುತ್ತೂರು ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಬಂಧಿತರನ್ನು ಸುಳ್ಯ ಸಂಪಾಜೆ ಗ್ರಾಮದ ನಿವಾಸಿ ಚರಣ್ (25 ವರ್ಷ), 2) ಪುತ್ತೂರು ಕೆಮ್ಮಿಂಜೆ ಗ್ರಾಮದ ನಿವಾಸಿ ಅರುಣ್ ಕುಮಾರ್ (38 ವರ್ಷ), ಮತ್ತು ಅರಿಯಡ್ಕ ನಿವಾಸಿ ನಾರಾಯಣ ನಾಯ್ಕ ಎಂದು ಗುರುತಿಸಲಾಗಿದೆ.

ಬುಧವಾರ ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಅರಿಯಡ್ಕ ಗ್ರಾಮದ ಬಳ್ಳಿಕಾನ ಎಂಬಲ್ಲಿ ನಾರಾಯಣ ನಾಯ್ಕ ಎಂಬವರ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುವಲ್ಲಿಗೆ ಪುತ್ತೂರು ಗ್ರಾಮಾಂತರ ವೃತ್ತದ ವೃತ್ತ ನಿರೀಕ್ಷಕರವರು ಸಿಬ್ಬಂದಿಗಳೊಂದಿಗೆ ಸದರಿ ಮನೆಗೆ ದಾಳಿ ನಡೆಸಿದ್ದು, ಆರೋಪಿಗಳು ಸುಳ್ಯ ಮೂಲದ ಮಹಿಳೆಯೊಬ್ಬಳನ್ನು ಹಣದ ಆಮಿಷ ತೋರಿಸಿ ಕರೆದುಕೊಂಡು ಬಂದು ವೇಶ್ಯಾವಾಟಿಕೆ ನಡೆಸುತ್ತಿರುವುದಾಗಿ ಒಪ್ಪಿಕೊಂಡಿದ್ದು ಹಾಗೂ ಮನೆಯಲ್ಲಿ ವೇಶ್ಯಾವಾಟಿಕೆ ಅನುಮತಿ ನೀಡಿದ ಮೇರೆಗೆ ನಾರಾಯಣ ನಾಯ್ಕ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ನೊಂದ ಮಹಿಳೆಯನ್ನು ಮಹಿಳಾ ಮತ್ತು ಮಕ್ಕಳ ಸಂರಕ್ಷಣಾ ಕೇಂದ್ರಕ್ಕೆ ಕಳುಹಿಸಿಲಾಗಿದೆ .

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.