ಪುತ್ತೂರು: ಹರ್ಷ ಗೃಹೋಪಯೋಗಿ ಮಳಿಗೆಯ ಗೋದಾಮಿನಲ್ಲಿ ಬೆಂಕಿ ಅವಘಡ: ಅಪಾರ ನಷ್ಟ

Spread the love

ಪುತ್ತೂರು: ಹರ್ಷ ಗೃಹೋಪಯೋಗಿ ಮಳಿಗೆಯ ಗೋದಾಮಿನಲ್ಲಿ ಬೆಂಕಿ ಅವಘಡ: ಅಪಾರ ನಷ್ಟ
 

ಪುತ್ತೂರು: ನಗರದ ದರ್ಬೆಯಲ್ಲಿರುವ ಹರ್ಷ ಗೃಹೋಪಯೋಗಿ ಮಳಿಗೆಯ ಗೋದಾಮಿನಲ್ಲಿ ಇಂದು ಬೆಂಕಿ ಅವಘಡ ಸಂಭವಿಸಿದೆ.

ಇಂದು ಬೆಳಗ್ಗಿನ ಜಾವ ಹರ್ಷ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ಅರಿತು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದವರು ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ.

ಬೆಂಕಿಯಿಂದ ಗೋದಾಮಿನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳು ಹಾನಿಗೊಂಡಿವೆ ಎಂದು ತಿಳಿದುಬಂದಿದೆ.

ಪುತ್ತೂರು ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.


Spread the love

Leave a Reply