Home Mangalorean News Kannada News ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Spread the love

ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಪುತ್ತೂರು: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಬಂಧಿತ ಆರೋಪಿಯನ್ನು ಸ್ವರೂಪ್ @ ಸ್ವರೂಪ್ ಅಮೀನ್ ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ 2015ರಲ್ಲಿ ದಾಖಲಾದ ಅಪರಾಧ ಸಂಖ್ಯೆ 100/2015ರ ಪ್ರಕರಣದಲ್ಲಿ ಕಲಂ 447, 427, 504 ಹಾಗೂ 506ರಡಿ ಪ್ರಕರಣ ದಾಖಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನ್ಯ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಆರೋಪಿಯು ಕಳೆದ ಸುಮಾರು ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದನು. ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ ಪುತ್ತೂರು ನಗರ ಠಾಣೆ ಪೊಲೀಸರು, ಕೇರಳ ರಾಜ್ಯದ ಮಂಜೇಶ್ವರದ ಪಾವೂರು ಪ್ರದೇಶದಲ್ಲಿ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ.

ಬಳಿಕ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.


Spread the love

Exit mobile version