ಪುತ್ತೂರು: 15ರಂದು ಬೃಹತ್ ಉದ್ಯೋಗ ಮೇಳ

ಪುತ್ತೂರು: 15ರಂದು ಬೃಹತ್ ಉದ್ಯೋಗ ಮೇಳ

ಮಂಗಳೂರು :ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಂಗಳೂರು, ಯುವ ಉದ್ಯೋಗಾಕಾಂಕ್ಷಿಗಳ ಸೇವಾ ಕೇಂದ್ರ, ತಾಲೂಕು ಪಂಚಾಯತ್ ಪುತ್ತೂರು, ಈಶ ವಿದ್ಯಾಲಯ ಪುತ್ತೂರು, ರೋಟರಿ ಕ್ಲಬ್ ಪುತ್ತೂರು ಯುವ, ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು ಹಾಗೂ ವಾಣಿಯನ್ ಗಾಣಿಗ ಸಮಾಜ ಪುತ್ತೂರು ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಕೌಶಲ್ಯ ದಿನದ ಅಂಗವಾಗಿ ಜುಲೈ 15 ರಂದು ಬೆಳಿಗ್ಗೆ 10 ರಿಂದ 4 ಗಂಟೆವರೆಗೆ ಶ್ರೀ ಮಹಾಲಿಂಗೇಶ್ವರ ಸಭಾಭವನ, ಪುತ್ತೂರು ಇಲ್ಲಿ ಜಿಲ್ಲಾಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ಸುಮಾರು 30 ಕ್ಕಿಂತ ಹೆಚ್ಚು ಕಂಪೆನಿಗಳು ಭಾಗವಹಿಸಲಿದ್ದು, ತಮ್ಮ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದ್ದಾರೆ. ಎಸ್.ಎಸ್.ಎಲ್.ಸಿ., ಪಿ.ಯು.ಸಿ, ಐ.ಟಿ.ಐ., ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಆಸಕ್ತ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ ವಿವರವುಳ್ಳ ಬಯೋಡಾಟಾ ಹಾಗೂ ಆಧಾರ್ ಕಾರ್ಡ್‍ನೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಂಗಳೂರು ದೂರವಾಣಿ ಸಂಖ್ಯೆ:0824-2457139ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳ ಪ್ರಕಟಣೆ ತಿಳಿಸಿದೆ.