ಪೆರ್ನೆ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ – ರಸ್ತೆ ಸಂಚಾರ ಸ್ಥಗಿತ

Spread the love

ಪೆರ್ನೆ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ – ರಸ್ತೆ ಸಂಚಾರ ಸ್ಥಗಿತ
ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಸಮೀಪದ ಬಿಳಿಮಾರು ಎಂಬಲ್ಲಿ ಅನಿಲ ಟ್ಯಾಂಕರೊಂದು ಉರುಳಿ ಬಿದ್ದ ಪರಿಣಾಮ ಹಲವು ಗಂಟೆಗಳ ಕಾಲ ರಸ್ತೆ ತಡೆ ಉಂಟಾದ ಘಟನೆ ಸೋಮವಾರ ನಡೆದಿದೆ.

perne-gas-tanker-overturn-20160801

ಮಂಗಳೂರಿನಿಂದ ಬೆಂಗಳೂರಿನ ಕಡೆಗೆ ಅನಿಲವನ್ನು ಹೇರಿಕೊಂಡು ಹೋಗುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಉರುಳಿ ಬಿದ್ದಿದೆ ಎನ್ನಲಾಗಿದೆ. ಘಟನೆಯಿಂದ ಟ್ಯಾಂಕರ್ ಚಾಲಕ ತಮಿಳುನಾಡು ಮೂಲದ ಲೋಕನಾಂದ ಎಂಬವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಘಟನೆಯ ಪರಿಣಾಮ ಸುಮಾರು 6 ಗಂಟೆಗಳ ಕಾಲ ರಸ್ತೆ ಸಂಚಾರ ಸ್ಥಗಿತಗೊಂಡಿದ್ದು, ಪೋಲಿಸರು ಆಗಮಿಸಿ ಟ್ಯಾಂಕರ್ ತೆರವುಗೊಳಿಸಿ ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸಿದರು.
ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಠಾಣೆಯ ಪೋಲಿಸರು ಆಗಮಿಸಿ ಸಂಚಾರ ವ್ಯವಸ್ಥೆ ಸುಗಮಗೊಳಿಸಿದರು.


Spread the love