ಪೊಲೀಸರು ಕುಂಕುಮ, ವಿಭೂತಿ ಹಚ್ಚಿಕೊಳ್ಳಬಾರದು ಎಂದಿಲ್ಲ, ತಪ್ಪು ಮಾಹಿತಿ ನೀಡಿದವರ ವಿರುದ್ದ ಕ್ರಮ: ಡಾ.ಜಿ.ಪರಮೇಶ್ವರ್ ಎಚ್ಚರಿಕೆ

Spread the love

ಪೊಲೀಸರು ಕುಂಕುಮ, ವಿಭೂತಿ ಹಚ್ಚಿಕೊಳ್ಳಬಾರದು ಎಂದಿಲ್ಲ, ತಪ್ಪು ಮಾಹಿತಿ ನೀಡಿದವರ ವಿರುದ್ದ ಕ್ರಮ: ಡಾ.ಜಿ.ಪರಮೇಶ್ವರ್ ಎಚ್ಚರಿಕೆ

ಬೆಂಗಳೂರು: ಪೊಲೀಸರು ಹಣೆಗೆ ಕುಂಕುಮ, ವಿಭೂತಿ ಹಚ್ಚಿಕೊಳ್ಳಬಾರದು ಎಂದು ನಾನು ಯಾವುದೇ ಸೂಚನೆಗಳನ್ನು ಕೊಟ್ಟಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದು, ತಪ್ಪು ಮಾಹಿತಿ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರು ಬೊಟ್ಟು, ವಿಭೂತಿ ಏನು ಬೇಕಾದರೂ ಇಟ್ಟುಕೊಳ್ಳಬಹುದು, ಅವರು ಯುನಿಫಾರ್ಮ್ ನಲ್ಲಿ ಕೆಲಸ ಮಾಡಬೇಕು. ಅವರಿಗೆ ಅವರದ್ದೇ ಆದ ಪೊಲೀಸ್ ರೂಲ್ಸ್ ಚೌಕಟ್ಟು ಇದೆ, ಅದರೊಳಗೆ ಏನೂ ಬೇಕಾದರೂ ಮಾಡಬಹುದು. ನಾನೂ ಏನನ್ನೂ ಹೇಳಿಲ್ಲ. ಸ್ಪಷ್ಟವಾಗಿ ಕಾನೂನಿನ ಚೌಕಟ್ಟಿನಲ್ಲಿ ಕರ್ತವ್ಯ ಮಾಡಿ ಎಂದಷ್ಟೇ ಹೇಳಿದ್ದೇನೆ ಎಂದರು.

ಯಾರು ಈ ರಿತ್ತಿ ಸುದ್ದಿ ಬರೆದಿದ್ದಾರೋ ಅವರ ಮೇಲೂ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ನಾವು ಹೇಳದೆ ಇರುವುದನ್ನೆಲ್ಲ ಪತ್ರಿಕೆಯಲ್ಲಿ ಪ್ರಿಂಟ್ ಮಾಡಿ ಗೊಂದಲ ಸೃಷ್ಟಿ ಮಾಡುವುದು ಶಾಂತಿ ಕಡದಲು ಕಾರಣವಾಗುತ್ತದೆ ಎಂದರು.


Spread the love