ಪೊಲೀಸರ ಹೆಸರು ಹೇಳಿ ವ್ಯಕ್ತಿಯಿಂದ ಹಣವನ್ನು ಸುಲಿಗೆ ಮಾಡಿದ ಗ್ರಾಪಂ ಸದಸ್ಯನ ಸೆರೆ

Spread the love

ಪೊಲೀಸರ ಹೆಸರು ಹೇಳಿ ವ್ಯಕ್ತಿಯಿಂದ ಹಣವನ್ನು ಸುಲಿಗೆ ಮಾಡಿದ ಗ್ರಾಪಂ ಸದಸ್ಯನ ಸೆರೆ

ಮಂಗಳೂರು:  ನಗರ ವ್ಯಾಪ್ತಿಯ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿನ ಆರೋಪಿಯ ಹೆಸರನ್ನು ಪೊಲೀಸರಲ್ಲಿ ಪ್ರಭಾವ ಬೀರಿ ಮಾತುಕತೆ ನಡೆಸಿ ಪ್ರಕರಣದಿಂದ ಹೆಸರನ್ನು ತೆಗೆಯುತ್ತೇನೆ ಎಂದು ಹೇಳಿ ರೂ 2.95 ಲಕ್ಷ ಹಣವನ್ನು ಸುಲಿಗೆ ಮಾಡಿದ ಪ್ರಕರಣದಲ್ಲಿ ಭಾಗಿಯಾದ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿರುತ್ತಾರೆ.

ಬಂಧಿತ ಆರೋಪಿಯನ್ನು ಪಾವೂರು ನಿವಾಸಿ ಅಬ್ದುಲ್‌ ಖಾದರ್‌ ರಿಝ್ವಾನ್‌ ಎಂದು ಗುರುತಿಸಲಾಗಿದೆ

2021 ನೇ ದಶಂಬರ್ ತಿಂಗಳಲ್ಲಿ ಮಂಗಳೂರು ಕಮೀಷನರೇಟ್ ವ್ಯಾಪ್ತಿಯ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣವೊಂದು ದಾಖಲಾಗಿದ್ದು, ಈ ಪ್ರಕರಣದಲ್ಲಿನ ಆರೋಪಿಯು ದಸ್ತಗಿರಿಯಾಗದೇ ಇದ್ದು, ಈತನ ದಸ್ತಗಿರಿಗಾಗಿ ಹುಡುಕಾಡುತ್ತಿದ್ದರು. ಈ ಸಮಯದಲ್ಲಿ ಆತನನ್ನು ಸಂಪರ್ಕಿಸಿದ ಇಬ್ಬರು ಪ್ರಕರಣದಲ್ಲಿ ಹೆಸರನ್ನು ತೆಗೆಯಲು ಪೊಲೀಸರಿಗೆ ಹಣ ನೀಡಿ ಅವರ ಜೊತೆ ಪ್ರಭಾವ ಬೀರಿ ಮಾತುಕತೆ ನಡೆಸಿ ಕೇಸಿನಿಂದ ಹೆಸರನ್ನು ತೆಗೆಯುತ್ತೇವೆ ಎಂದು ಹೇಳಿಕೊಂಡು ಆತನಿಂದ 3 ಲಕ್ಷ ಹಣವನ್ನು ಡಿಮ್ಯಾಂಡ್ ಮಾಡಿ ಹಂತ ಹಂತವಾಗಿ ಒಟ್ಟು 2,95,000/- ಹಣವನ್ನು ಪಡೆದುಕೊಂಡಿದ್ದರು. ಈ ಹಣವನ್ನು ಪಡೆದ ಬಳಿಕ ಹಣ ನೀಡಿದ ವ್ಯಕ್ತಿಯನ್ನು ಪೊಲೀಸರು ಹುಡುಕಾಡುತ್ತಿದ್ದ ವಿಚಾರವನ್ನು ತಿಳಿದ ಆತನು ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಪಡೆದಿದ್ದನು.

ಇದಾದ ನಂತರ ಆತನಿಂದ ಹಣ ಪಡೆದುಕೊಂಡ ವ್ಯಕ್ತಿಗಳಿಂದ ಹಣವನ್ನು ವಾಪಾಸ್ಸು ನೀಡುವಂತೆ ತಿಳಿಸಿದಾಗ ಹಣದ ವಿಚಾರದಲ್ಲಿ ಕರೆ ಮಾಡಿದರೆ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿ ನಂತರ ರೂ. 30,000/- ಹಣವನ್ನು ನೀಡುವಂತೆ ಬೇಡಿಕೆಯಿಟ್ಟಿದ್ದು, ಇದರಿಂದ ಹಣವನ್ನು ಸುಲಿಗೆ ಮಾಡಿದ ಆರೋಪಿಗಳ ವಿರುದ್ಧ ಹಣವನ್ನು ಕಳೆದುಕೊಂಡ ವ್ಯಕ್ತಿಯು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದಂತೆ ಪ್ರಕರಣ ದಾಖಲಾಗಿರುತ್ತದೆ.

ಈ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ಹಣವನ್ನು ಸುಲಿಗೆ ಮಾಡಿದ ಆರೋಪಿ  ಅಬ್ದುಲ್ ಖಾದರ್ ರಿಝ್ವಾನ್ ನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ ಸಮಯ ಆರೋಪಿಯು ಇನ್ನೋರ್ವ ಆರೋಪಿಯ ಜೊತೆ ಸೇರಿಕೊಂಡು ಫಿರ್ಯಾದಿದಾರರ ವಿರುದ್ದ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಹೆಸರನ್ನು ತೆಗೆಯಲು ಸುರತ್ಕಲ್ ಹಾಗೂ ಪಾಂಡೇಶ್ವರ ಪೊಲೀಸರ ಜೊತೆ ಪ್ರಭಾವ ಬೀರಿ ಮಾತುಕತೆ ನಡೆಸಿ ಕೇಸಿನಿಂದ ಹೆಸರನ್ನು ತೆಗೆಯುತ್ತೇವೆ ಎಂದು ನಂಬಿಸಿ ಹಲವು ಕಂತುಗಳಲ್ಲಿ ಪ್ರಕರಣದ ಫಿರ್ಯಾಧಿದಾರರಿಂದ ಒಟ್ಟು 2,95,000/- ಹಣವನ್ನು ಸುಲಿಗೆ ಮಾಡಿದ್ದರು. ಈ ಪ್ರಕರಣದಲ್ಲಿ ಇನ್ನೋರ್ವ ಆರೋಪಿಯು ಭಾಗಿಯಾಗಿದ್ದು, ಆತನ ಪತ್ತೆ ಕಾರ್ಯ ಮುಂದುವರಿದಿದೆ.


Spread the love