ಪೊಲೀಸ್ ಆಯುಕ್ತ  ವಿಕಾಸ್ ಕುಮಾರ್ ಅವರಿಂದ ತೊಕ್ಕೊಟ್ಟು ಓವರ್ ಬ್ರಿಡ್ಜ್ ಮೇಲ್ಸೇತುವೆ ಪರಿಶೀಲನೆ

Spread the love

ಪೊಲೀಸ್ ಆಯುಕ್ತ  ವಿಕಾಸ್ ಕುಮಾರ್ ಅವರಿಂದ ತೊಕ್ಕೊಟ್ಟು ಓವರ್ ಬ್ರಿಡ್ಜ್ ಮೇಲ್ಸೇತುವೆ ಪರಿಶೀಲನೆ

ಮಂಗಳೂರು: ತೊಕ್ಕೊಟ್ಟು ಓವರ್ ಬ್ರಿಡ್ಜ್ ಮೇಲ್ಸೇತುವೆಯಲ್ಲಿ ಮಂಗಳವಾ ನಡೆದ ಅಫಘಾತದಲ್ಲಿ ನವದಂಪತಿಗಳು ಸಾವನ್ನಪ್ಪಿದ ಸ್ಥಳಕ್ಕೆ ಮಂಗಳೂರು ಪೊಲೀಸ್ ಆಯುಕ್ತರಾದ ವಿಕಾಸ್ ಕುಮಾರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಜಾಲ್ ನಿವಾಸಿ ರಯಾನ್ ಫೆರ್ನಾಂಡಿಸ್ (34) ಮತ್ತು ಪ್ರಿಯಾ ಫೆರ್ನಾಂಡಿಸ್ (26) ಮೃತರು. ಕಂಕನಾಡಿ ಫಾದರ್ ಮುಲ್ಲಸ್೯ ಆಸ್ಪತ್ರೆಯಲ್ಲಿ ಸಿಬ್ಬಂದಿಯಾಗಿರುವ ಇಬ್ಬರು ಕರ್ತವ್ಯ ಮುಗಿಸಿ ಉಳ್ಳಾಲ ಬಂಗೇರಲೇನ್ನಲ್ಲಿರುವ ಬಾಡಿಗೆ ಮನೆಗೆ ತೆರಳುವ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿತ್ತು.

ಬೈಕ್ ಮೇಲೆ ಹೋಗುತ್ತಿದ್ದ ದಂಪತಿ ಉಳ್ಳಾಲ ಕಡೆಗೆ ತಿರುಗುವ ಸಂದರ್ಭದಲ್ಲಿ ಅತಿ ವೇಗವಾಗಿ ತೊಕ್ಕೊಟ್ಟು ಫ್ಲೈ ಓವರ್ ಮೂಲಕ ಬಂದ ಲಾರಿ ಡಿಕ್ಕಿ ಹೊಡೆದಿದ್ದು, ಇವರಿಬ್ಬರ ಮೈಮೇಲೆ ಚಲಿಸಿದ್ದು, ಪ್ರಿಯಾ ಸ್ಥಳದಲ್ಲೇ ಮೃತಪಟ್ಟರೆ, ರಯಾನ್ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟರು.


Spread the love