ಪೊಲೀಸ್ ಕಾನ್ ಸ್ಟೇಬಲ್ ಮೇಲೆ ಹಲ್ಲೆ ನಡೆಸಿದ ಆರೋಪಿಯ ಕಾಲಿಗೆ ಗುಂಡೇಟು

ಪೊಲೀಸ್ ಕಾನ್ ಸ್ಟೇಬಲ್ ಮೇಲೆ ಹಲ್ಲೆ ನಡೆಸಿದ ಆರೋಪಿಯ ಕಾಲಿಗೆ ಗುಂಡೇಟು

ಬೆಂಗಳೂರು: ಸಂಜಯ ನಗರದಲ್ಲಿ ಬುಧವಾರ ಪೊಲೀಸ್ ಕಾನ್ ಸ್ಟೇಬಲ್ ಮೇಲೆ ಹಲ್ಲೆ ನಡೆಸಿದ ಒಂದನೇ ಆರೋಪಿಯ ಕಾಲಿಗೆ ಪೊಲೀಸರು ಗುರುವಾರ ನಸುಕಿನಲ್ಲಿ ಗುಂಡು ಹೊಡೆದಿದ್ದಾರೆ.

ಆರೋಪಿ ತಾಜುದ್ದೀನ್ ನನ್ನು ಗುರುವಾರ ನಸುಕಿನಲ್ಲಿ ಘಟನಾ ಸ್ಥಳಕ್ಕೆ ಕರೆದೊಯ್ದು ಮಹಜರು ನಡೆಸುವ ವೇಳೆ ಆತ ಪರಾರಿಯಾಗಲು ಯತ್ನಿಸಿದ್ದ ಎನ್ನಲಾಗಿದ್ದು ಸ್ವಲ್ಪ ದೂರ ಓಡಿದ ಆರೋಪಿಯನ್ನು ಬಂಧಿಸಲು ಹೋದ ಪೊಲೀಸರ ಮೇಲೆ ಆತ ಕಲ್ಲು ಮತ್ತು ಇಟ್ಟಿಗೆ ತುಂಡುಗಳನ್ನು ಎಸೆದಿದ್ದಾನೆ. ಈ ವೇಳೆ ಪಿ ಎಸ್ ಐ ರೂಪಾ ಮತ್ತು ಹೆಡ್ ಕಾನ್ ಸ್ಟೇಬಲ್ ಮಂಜಣ್ಣ ಅವರ ಮೇಲೆ ಆರೋಪಿ ಹಲ್ಲೆ ನಡೆಸಿದ್ದಾನೆ.

ಇದನ್ನೂ ಓದಿ – ಸಂಜಯನಗರ ಪೊಲೀಸರ ಮೇಲೆ ಹಲ್ಲೆ ಇಬ್ಬರ ಬಂಧನ

ತಕ್ಷಣ ಸಂಜಯನಗರ ಇನ್ಸಪೆಕ್ಟರ್ ಗಾಳಿಯಲ್ಲಿ ಎರಡು ಸುತ್ತು ಗುಂಡು ಹಾರಿಸಿದ್ದು, ಆದರೂ ಆರೋಪಿ ಶರಣಾಗದಿದ್ದಾಗ ಎಡಗಾಲಿಗೆ ಗುಂಡು ಹೊಡೆದಿದ್ದಾರೆ. ಗಾಯಗೊಂಡಿರುವ ಆರೋಪಿ ಮತ್ತು ಪೊಲೀಸ್ ಅಧಿಕಾರಿಗಳನ್ನು ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಉತ್ತರ ವಲಯ ಡಿಸಿಪಿ ಶಶಿಕುಮಾರ್ ತಿಳಿಸಿದ್ದಾರೆ.

Leave a Reply

  Subscribe  
Notify of