ಪೊಲೀಸ್ ಸಿಬ್ಬಂದಿಗೆ ಒತ್ತಡ ನಿವಾರಣೆಗೆ ಕ್ರೀಡೆ ಅಗತ್ಯ: ಜಿಲ್ಲಾಧಿಕಾರಿ ಕೂರ್ಮರಾವ್ ಎಂ

Spread the love

ಪೊಲೀಸ್ ಸಿಬ್ಬಂದಿಗೆ ಒತ್ತಡ ನಿವಾರಣೆಗೆ ಕ್ರೀಡೆ ಅಗತ್ಯ: ಜಿಲ್ಲಾಧಿಕಾರಿ ಕೂರ್ಮರಾವ್ ಎಂ

ಉಡುಪಿ: ಸಾರ್ವಜನಿಕರ ಸೇವೆಯಲ್ಲಿ ಪ್ರತಿದಿನ ಒತ್ತಡದಲ್ಲಿ ಕಾರ್ಯನಿರ್ವಹಿಸುವ ಪೊಲೀಸ್ ಸಿಬ್ಬಂದಿಗೆ ಒತ್ತಡ ನಿವಾರಣೆಗೆ ಹಾಗೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡಾ ಚಟುವಟಿಕೆಗಳಲ್ಲಿ ಭಾವಹಿಸುವುದು ಅತ್ಯಂತ ಮುಖ್ಯವಾದುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.

ಅವರು ಇಂದು ಅಜ್ಜರಕಾಡು ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ಪ್ರತಿದಿನ ಯಾವುದಾದರೊಂದು ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಕೊಳ್ಳುವುದರಿಂದ, ಕರ್ತವ್ಯದ ಅವಧಿಯಲ್ಲಿ ಹೆಚ್ಚಿನ ಉತ್ಸಾಹದಿಂದ ಕಾರ್ಯನಿರ್ವಹಿಸಲು ಸಾಧ್ಯವಾಗುವುದರ ಜೊತೆಗೆ ಒತ್ತಡ ರಹಿತ, ಆರೋಗ್ಯಕರ ಜೀವ ನಡೆಸಲು ಸಾಧ್ಯವಾಗಲಿದೆ. ಪೊಲೀಸ್ ಸಿಬ್ಬಂದಿಗಳು ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಮೂಲಕ ತಮ್ಮಲ್ಲಿನ ಪ್ರತಿಭೆಯನ್ನು ಪ್ರದರ್ಶಿಸಲು ಸಾಧ್ಯವಾಗಲಿದೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ ಮಾತನಾಡಿ, ಈ ಬಾರಿಯ ಕ್ರೀಡಾಕೂಟದಲ್ಲಿ 50 ವರ್ಷ ಮೆಲ್ಪಟ್ಟ ಸಿಬ್ಬಂದಿಗಳಿಗೆ ಪ್ರತ್ಯೇಕ ಸ್ಪರ್ದೇಗಳನ್ನು ಆಯೋಜಿಸಿರುವುದರ ಜೊತೆಗೆ ಪೊಲೀಸ್ ಅಪರಾಧ ಪತ್ತೆ ವಿಭಾಗ ಮತ್ತು ಡಿಎಆರ್ ಸಿಬ್ಬಂದಿಗಳಿಗೆ ವಿಶೇಷ ಸ್ಪರ್ದೇ ಹಾಗೂ ಕೆಸರುಗದ್ದೆ ಓಟದಂತಹ ಗ್ರಾಮೀಣ ಕ್ರೀಡೆಗಳನ್ನು ಆಯೋಜಿಸಿದೆ. ಈ ಕ್ರೀಡಕೂಟದ ಮೂಲಕ ಪೊಲೀಸ್ ಸಿಬ್ಬಂದಿ ತಮ್ಮ ಒತ್ತಡವನ್ನು ಮರೆತು , ಕ್ರೀಡಾ ಸ್ಪೂರ್ತಿಯಿಂದ ಹಾಗೂ ಹೆಚ್ಚಿನ ಒಗ್ಗಟ್ಟಿನಿಂದ ಕರ್ತವ್ಯ ನಿರ್ವಹಿಸಲು ಎಂದರು.

ಕ್ರೀಡಾ ತಂಡಗಳಿAದ ಪಥ ಸಂಚಲನ, ವಂದನೆ ಸ್ವೀಕಾರ ನಡೆಯಿತು. ಡಿಎಆರ್ ನ ಜೀವನ್ ಕ್ರೀಡಾಜ್ಯೋತಿಯೊಂದಿಗೆ ಆಗಮಿಸಿದರು, ಡಿಎಆರ್ ಸಬ್ ಇನ್ಸ್ಪೆಕ್ಟರ್ ಅದರ್ಶ ದೇವಣ್ಣ ನಾಯಕ ಪ್ರತಿಜ್ಞಾ ವಿಧಿ ಭೋದಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ ಸ್ವಾಗತಿಸಿದರು, ಎಎಸ್ಪಿ ಸಿದ್ದಲಿಂಗಪ್ಪ ವಂದಿಸಿದರು, ಸೆನ್ ಠಾಣೆಯ ಪೊಲೀಸ್ ನಿರೀಕ್ಷಕ ಮಂಜುನಾಥ್ ನಿರೂಪಿಸಿದರು.

ಉಡುಪಿ, ಕಾರ್ಕಳ, ಕುಂದಾಪುರ, ಡಿ.ಎ.ಆರ್ , ಮಹಿಳಾ ಪೊಲೀಸ್ ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದವು.


Spread the love

Leave a Reply

Please enter your comment!
Please enter your name here