ಪ್ರಚೋದನಾಕಾರಿ ಹೇಳಿಕೆಗಳಿಂದ ಅಹಿತಕರ ಘಟನೆಗಳಿಗೆ ಕಾರಣರಾಗುವ ಕಿಡಿಗೇಡಿಗಳನ್ನು ಗಡಿಪಾರು ಮಾಡಿ: ಯು.ಟಿ ಖಾದರ್

Spread the love

ಪ್ರಚೋದನಾಕಾರಿ ಹೇಳಿಕೆಗಳಿಂದ ಅಹಿತಕರ ಘಟನೆಗಳಿಗೆ ಕಾರಣರಾಗುವ ಕಿಡಿಗೇಡಿಗಳನ್ನು ಗಡಿಪಾರು ಮಾಡಿ: ಯು.ಟಿ ಖಾದರ್

ಮಂಗಳೂರು: ರಾಜಕೀಯ ಲಾಭ, ವ್ಯಾಪಾರಕ್ಕಾಗಿ ಪ್ರಚೋದನಕಾರಿ ಹೇಳಿಕೆ ನೀಡಿ ಸಮಾಜದಲ್ಲಿ ಅವಿಶ್ವಾಸ, ದ್ವೇಷ, ಕೊಲೆ, ಅಹಿತಕರ ಘಟನೆಗಳಿಗೆ ಕಾರಣರಾಗುವ ಕಿಡಿಗೇಡಿಗಳನ್ನು ಗಡಿಪಾರು ಮಾಡಲು ಇಲ್ಲಿನ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ಅಂತಹವರು ಸಮಾಜಕ್ಕೆ ಅಪಾಯಕಾರಿ ಎಂದು ಶಾಸಕ ಹಾಗೂ ವಿಧಾನಸಭಾ ಸಭಾ ವಿಪಕ್ಷ ನಾಯಕ ಯು.ಟಿ.ಖಾದರ್ ತಿಳಿಸಿದ್ದಾರೆ.

ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ತುಮಕೂರಿನಲ್ಲಿ ಬಹಿರಂಗವಾಗಿ ನೀಡಿರುವ ಪ್ರಚೋದನಾಕಾರಿ ಹೇಳಿಕೆ ಸಂಬಂಧಿಸಿದಂತೆ ಮಾಧ್ಯಮಗೋಷ್ಠಿಯಲ್ಲಿಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಈ ರೀತಿ ಹೇಳಿಕೆ ನೀಡುವ ಯಾರೇ ವ್ಯಕ್ತಿಯಾಗಿದ್ದರೂ ಅವರ ವಿರುದ್ಧ ಸೂಕ್ತ ಕ್ರಮ ಅಗತ್ಯವಿದೆ. ಈ ರೀತಿಯ ಹೇಳಿಕೆ ಕೊಡುವವರನ್ನು ಗಡಿಪಾರು ಮಾಡಿ ಎಂದು ಆಗ್ರಹಿಸಿದರು.

ಕೊಲೆ ಘಟನೆಗಳಿಗೆ ಪ್ರೇರಣೆ ಕೊಡುವ ಹೇಳಿಕೆ ಸಮಾಜಕ್ಕೆ ಅತ್ಯಂತ ಅಪಾಯಕಾರಿ. ಈ ಹೇಳಿಕೆ ಕೊಡುವವರು ನಿಜವಾದ ದೇಶದ್ರೋಹಿಗಳು. ಸಮಾಜ‌ ಒಗ್ಗಾಟಾಗಿರಬೇಕೆಂಬುದು ಸಮಾಜದ ನಿಲುವು. ಹಿಂದೂ, ಮುಸ್ಲಿಂ, ಕ್ರೈಸ್ತ ಯಾರ ಕೊಲೆಯು ಆಗಬಾರದು ಎಂದು ಪ್ರಯತ್ನ ಪಡಬೇಕು. ಬಿಜೆಪಿಯವರು ಕೊಲೆ ಆಗುವುದಕ್ಕೆ ಕಾಯುತ್ತಿದ್ದಾರೆ. ಒಂದಾದರೆ ಎರಡು ಆಗಬೇಕೆಂಬ ಮನಸ್ಥಿತಿ ಯಾಕೆ ಎಂದು ಕಿಡಿಕಾರಿದರು.

ಕೊಲೆಯಾದ ಕುಟುಂಬಕ್ಕೆ ಮಾತ್ರ ಆ ಸಾವಿನ ನೋವು ಗೊತ್ತಿರುತ್ತದೆ. ಫಾಜಿಲ್ ಕೊಲೆ ಪ್ರಕರಣ ಮರು ತನಿಖೆಯಾಗಬೇಕು. ಈ ರೀತಿಯ ಹೇಳಿಕೆ ನೀಡುವವರನ್ನು ಗಡಿಪಾರು ಮಾಡಬೇಕು. ಮನೆಗೆ, ಊರಿಗೆ, ಜಿಲ್ಲೆಗೆ ಇಂತವರು ಭಾರ. ಇಂತಹ ಮೆಂಟಲ್ ಕೇಸ್ ಗಳನ್ನು ಇಟ್ಟುಕೊಂಡು ನಾವು ಯಾಕೆ ಜಿಲ್ಲೆ ಸುತ್ತಾಡಬೇಕು. ಮುಂದೆ ನಮ್ಮ ಸರ್ಕಾರ ಬಂದ್ರೆ ರಾಜ್ಯದಲ್ಲಿ ನಡೆದಿರುವ ಎಲ್ಲಾ ಕೊಲೆ ಪ್ರಕರಣಗಳನ್ನು ಮರು ತನಿಖೆ ಮಾಡುತ್ತೇವೆ. ನೈಜ ಅಪಾರಧಿಗಳು, ಪ್ರೇರಣೆ ಕೊಟ್ಟವರನ್ನು ಬಂಧಿಸುತ್ತೇವೆ ಎಂದು ಯು.ಟಿ ಖಾದರ್ ತಿಳಿಸಿದರು.


Spread the love