
ಪ್ರಜಾಧ್ವನಿ ಯಾತ್ರೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ – ಪ್ರಖ್ಯಾತ್ ಶೆಟ್ಟಿ ಮನವಿ
ಉಡುಪಿ: ಜನವರಿ 22 ರಂದು ಉಡುಪಿಯ ಕ್ರಿಶ್ಚಿಯನ್ ಹೈಸ್ಕೂಲ್ ಮೈದಾನದಲ್ಲಿ ಆಯೋಜಿಸಿರುವ ಪ್ರಜಾಧ್ವನಿ ಯಾತ್ರೆಯ ಬಹಿರಂಗ ಸಭೆಯಲ್ಲಿ ಜಿಲ್ಲೆಯ ಎಲ್ಲಾ ಕಾರ್ಯಕರ್ತರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಈ ಮೂಲಕ ರಾಜ್ಯದಲ್ಲಿನ ಭ್ರಷ್ಠ ಬಿಜೆಪಿ ಸರಕಾರಕ್ಕೆ ಬಿಸಿಮುಟ್ಟಿಸುವ ಕಾರ್ಯದಲ್ಲಿ ಕೈಜೋಡಿಸುವಂತೆ ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ ಮನವಿ ಮಾಡಿದ್ದಾರೆ.
ರಾಜ್ಯದಲ್ಲಿನ ಬಿಜೆಪಿ ಸರಕಾರ ಉತ್ತಮ ಆಡಳಿತ ನೀಡುವಲ್ಲಿ ಸಂಪೂರ್ಣ ವಿಫಲವಾಗಿದ್ದು. ಜನರ ಹಿತ ಮರೆತು ಭ್ರಷ್ಠಾಚಾರದಲ್ಲಿ ಮುಳುಗಿದೆ. ರಾಜ್ಯದ ಪರಿಸ್ಥಿತಿಗೆ ಪೂರಕವಾಗಿ ಉಡುಪಿ ಜಿಲ್ಲೆಯಲ್ಲಿನ ಬಿಜೆಪಿ ಶಾಸಕರು ಮತ್ತು ಸಂಸದರೂ ಕೂಡ ಜನರ ಹಿತವನ್ನು ಕಾಯುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಅನಧಿಕೃತ ಟೋಲ್ ಸಂಗ್ರಹ, ಪ್ರವಾಸೋದ್ಯಮದ ಹೆಸರಿನಲ್ಲಿ ಪ್ರವಾಸಿಗರಿಂದ ದುಬಾರಿ ವೆಚ್ಚವನ್ನು ಪಡೆದು ಇದರ ಮೂಲಕ ತಮ್ಮ ಕಿಸೆಯನ್ನು ತುಂಬಿಸಿಕೊಳ್ಳುವ ಕಾಯಕದಲ್ಲಿ ತೊಡಗಿದ್ದು ಇದರಿಂದಾಗಿ ಜಿಲ್ಲೆಯ ಜನತೆ ಬೇಸತ್ತು ಹೋಗಿದೆ.
ಬಿಜೆಪಿಯ ಈ ದುರಾಡಳಿತಕ್ಕೆ ಬೇಸತ್ತಿರುವ ಜನತೆ ಸರ್ಕಾರವನ್ನು ಬದಲಿಸುವ ಮನಸ್ಸು ಮಾಡಿದ್ದಾರೆ. ಈ ನಿಟ್ಟಿನಲ್ಲಿ ಜನರ ವಿಶ್ವಾಸವನ್ನು ಮತ್ತೆ ಪಡೆದುಕೊಳ್ಳಲು ಕಾಂಗ್ರೆಸ್ ಪಕ್ಷವು ರಾಜ್ಯದಾದ್ಯಂತ ಪ್ರಜಾಧ್ವನಿ ಬಸ್ ಯಾತ್ರೆಯನ್ನು ಹಮ್ಮಿಕೊಂಡಿದ್ದು, ಈಗಾಗಲೇ ಯಾತ್ರೆ ಸಂಚರಿಸಿದ ಜಿಲ್ಲೆಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜನವರಿ 22 ರಂದು ಭಾನುವಾರ ಜಿಲ್ಲೆಯ ಜನತೆ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಅವರು ಪತ್ರಿಕಾ ಪ್ರಕಟಣೆಯ ಮೂಲಕ ಮನವಿ ಮಾಡಿದ್ದಾರೆ.